Wednesday, July 6, 2022

ಅಯೋಧ್ಯೆಯಲ್ಲಿ ಭೂಮಿ ಪೂಜೆಯ ಸಂಭ್ರಮ:ದಕ್ಷಿಣ ಕನ್ನಡ ಸಹಿತ ರಾಜ್ಯದಲ್ಲಿ ಕಟ್ಟೆಚ್ಚರ

Follow Us

ಬೆಂಗಳೂರು: ಕಳೆದ 500 ವರ್ಷಗಳಿಂದ ದೇಶ ವಿದೇಶಗಳಲ್ಲಿ ನೆಲೆಸಿರುವ ಕೋಟ್ಯಂತರ ಹಿಂದೂಗಳು ಎದುರು ನೋಡುತ್ತಿದ್ದ ರಾಮ ಮಂದಿರದ ನಿರ್ಮಾಣ ಕಾರ್ಯ ಇಂದು ಆರಂಭವಾಗಲಿದೆ. ಮಧ್ಯಾಹ್ನ 12.30ರ ಶುಭ ಮೂಹೂರ್ತದಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 12. 40ಕ್ಕೆ ಮೊದಲಿಗೆ ಇಟ್ಟಿಗೆ  ಪ್ರತಿಷ್ಟಾಪಿಸಲಿದ್ದಾರೆ.  ಬೆಳ್ಳಿ ಇಟ್ಟಿಗೆ ಇದಾಗಿದೆ.

ಅಯೋಧ್ಯೆಯಲ್ಲಿ ಭವ್ಯ ಸಮಾರಂಭಕ್ಕೆ ಎಲ್ಲ ಸಿದ್ದತೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗರಿಷ್ಟ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೋಮು ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಲಾಗಿರುವ ದಕ್ಷಿಣ ಕನ್ನಡದಲ್ಲಿ  ಬಿಗಿ  ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಕೆಎಸ್ಆರ್ ಪಿ ಮತ್ತು  ಸಿ ಎ ಆರ್ ಹೆಚ್ಚು ವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಬೆಂಗಳೂರಿನ ಶಿವಾಜಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರಾರ್ಥನಾ ಮಂದಿರಗಳಿಗೆ ಭೇಟಿ ನೀಡುವವರ ಮೇಲೆ ಕಣ್ಗಾವಲು ಇರಿಸಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುವ ಸಂದೇಶಗಳನ್ನು ಗಮನಿಸಲಾಗುತ್ತಿದೆ.

ಈ ಮಧ್ಯೆ ರಾಜ್ಯದ ಎಲ್ಲ ದೇವಸ್ಥಾನಗಳು ಮತ್ತು ಮನೆಗಳಲ್ಲಿ ಜನರು ಭೂಮಿ ಪೂಜೆಯ ಸಂಭ್ರಮಕ್ಕಾಗಿ  ವಿಶೇಷ ಪೂಜೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...
- Advertisement -
error: Content is protected !!