Tuesday, April 13, 2021

ದೆಹಲಿಯಲ್ಲಿ ಭಯೋತ್ಪಾದಕರ ದಾಳಿ ಭೀತಿ: ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ

ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಭಯೋತ್ಪಾದಕ ಸಂಘಟನೆಗಳು ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ ವರದಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಜಮ್ಮು ಕಾಶ್ಮೀರದಿಂದ ನಾಲ್ಕು ಮಂದಿ ಭಯೋತ್ಪಾದಕರು ದೆಹಲಿ ತಲುಪಿರುವ ಸಾಧ್ಯತೆಯಿದೆ ಎಂದು ಜಮ್ಮು ಕಾಶ್ಮೀರ ಗುಪ್ತಚರ ದಳ ದೆಹಲಿ ಪೊಲೀಸ್ ಇಲಾಖೆಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಭದ್ರತಾಪಡೆ ಬಂಧಿಸಿದ ಭಯೋತ್ಪಾದಕನ ವಿಚಾರಣೆ ಸಂದರ್ಭದಲ್ಲಿ ಈ ಮಾಹಿತಿ ದೊರೆತಿದೆ ಎಂದು ವರದಿಯಾಗಿದೆ. ಬಂಧಿತ ಭಯೋತ್ಪಾದಕ , ದೆಹಲಿಯಲ್ಲಿ ದಾಳಿ ನಡೆಸುವ ಸಂಚಿನ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದ ಎಂದು ಹೇಳಲಾಗಿದೆ. ದೆಹಲಿಯಲ್ಲಿ ಮುಖ್ಯವಾಗಿ ಆಸ್ಪತ್ರೆಗಳನ್ನು  ಗುರಿಯಾಗಿರಿಸಿ ಭಯೋತ್ಪಾದಕರು ದಾಳಿ ನಡೆಸಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!