Monday, April 12, 2021

ಶ್ರೀನಗರದಲ್ಲಿ ಹಿಜ್ಬುಲ್’ನ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ವ್ಯಾಪ್ತಿಯ ನವಾ ಕಡಲ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಗೆ ಹಿಜ್ಬುಲ್ ಮುಜಾಹಿದ್ದೀನ್ ನ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಘಟನೆ ಸ್ಥಳದಲ್ಲಿ ಎರಡು ಎಕೆ 47 ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಈ ಕಾರ್ಯಾಚರಣೆಯಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಹಿಜ್ಬುಲ್ ಉಗ್ರರ ಅಡಗುತಾಣದ ಮೇಲೆ ಮಧ್ಯರಾತ್ರಿ ಸುಮಾರಿಗೆ ಜಮ್ಮು ಕಾಶ್ಮೀರ ರಾಜ್ಯ ಪೊಲೀಸ್ ಮತ್ತು ಕೇಂದ್ರ ಪೊಲೀಸ್ ರಿಸರ್ವ್ ಫೋರ್ಸ್ ಸಿಬ್ಬಂದಿ ಉಗ್ರರನ್ನು ಹತ್ಯೆಗೈದಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪೋಲಿಸ್ ಅಧಿಕಾರಿ ತಿಳಿಯಪಡಿಸಿದ್ದಾರೆ. ಶ್ರೀನಗರದ ಕನೆಮಾಜಾರ್ ನವಾಕಡಾಲ್ ಪ್ರದೇಶದಲ್ಲಿ ಎನ್ಕೌಂಟರ್ ಮುಂದುವರೆದಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!