Saturday, April 17, 2021

ರಸಗೊಬ್ಬರ ದರ ಭಾರೀ ಹೆಚ್ಚಳ: ರೈತರು ಕಂಗಾಲು

newsics.com
ನವದೆಹಲಿ: ದೇಶದ ಬೃಹತ್ ರಸಗೊಬ್ಬರ ಮಾರಾಟ ಸಂಸ್ಥೆ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋಆಪರೇಟಿವ್ (ಇಫ್ಕೋ) ತನ್ನ ಉತ್ಪನ್ನಗಳ ಬೆಲೆಯನ್ನು ಗಣನೀಯವಾಗಿ ಹೆಚ್ಚಿಸಿದೆ.
ರಸಗೊಬ್ಬರ ಬೆಲೆ ಹೆಚ್ಚಳದಿಂದ ರೈತರು ಕಂಗಾಲಾಗಿದ್ದಾರೆ.
ದೇಶದಲ್ಲಿ ಯೂರಿಯಾದ ಬಳಿಕ ಅತ್ಯಂತ ಹೆಚ್ಚು ಬಳಕೆಯಾಗುವ ಡೈ-ಅಮೋನಿಯಂ ಫಾಸ್ಫೇಟ್(ಡಿಎಪಿ)ನ 50 ಕೆ.ಜಿ.ಯ ಚೀಲಕ್ಕೆ ಈಗ ರೈತರು 1,900 ರೂ.ಗಳನ್ನು ಪಾವತಿಸಬೇಕಿದೆ. ಪ್ರತಿ ಚೀಲಕ್ಕೆ 1,200 ರೂ.ಗಳ ಹಾಲಿ ಬೆಲೆಗೆ ಹೋಲಿಸಿದರೆ ಇದು ಶೇ.58ಕ್ಕೂ ಹೆಚ್ಚಿನ ಏರಿಕೆಯಾಗಿದೆ.
ಇಫ್ಕೋ ವಿವಿಧ ಎನ್‌ಕೆಪಿಎಸ್ (ನೈಟ್ರೋಜನ್, ರಂಜಕ, ಪೊಟ್ಯಾಷ್, ಗಂಧಕ) ಅನುಪಾತಗಳ ಇತರ ಜನಪ್ರಿಯ ಸಂಕೀರ್ಣ ರಸಗೊಬ್ಬರಗಳ ಬೆಲೆಗಳನ್ನೂ ಭಾರೀ ಪ್ರಮಾಣದಲ್ಲಿ ಹೆಚ್ಚಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!