ಬೆಂಗಳೂರು: ರಾಜ್ಯದಲ್ಲಿ ಬುಧವಾರ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 3176 ಜನರಿಗೆ ಕೊರೋನಾ ಸೋಂಕು ತಗುಲಿದೆ.
ರಾಜ್ಯದಲ್ಲಿ ಬುಧವಾರ ಮಹಾಮಾರಿಗೆ ಬರೋಬ್ಬರಿ 87 ಮಂದಿ ಅಸುನೀಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸಾವಿನ ಸಂಖ್ಯೆ 928 ಕ್ಕೇರಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿದ್ದು, ಬುಧವಾರ ಮಹಾನಗರಿಯಲ್ಲಿ 1975 ಮಂದಿಗೆ ಕೊರೋನಾ ದೃಢಪಟ್ಟಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 60 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 87 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 3000ಕ್ಕೂ ಹೆಚ್ಚು ಮಂದಿಗೆ ಕೊರೋನಾ ತಗುಲಿದೆ. ಸಾವಿನಲ್ಲೂ ಬುಧವಾರದ ವರದಿ ದಾಖಲೆ ಬರೆದಿದೆ.
ಕೊರೋನಾಗೆ ಸ್ವಾಮೀಜಿ ಬಲಿ
ಬೆಂಗಳೂರು ಸೇರಿದಂತೆ ಆರಕ್ಕೂ ಹೆಚ್ಚು ಜಿಲ್ಲೆಗಳು ಹಾಗೂ ರಾಜ್ಯದ ವಿವಿಧೆಡೆ ಲಾಕ್ ಡೌನ್ ಜಾರಿಯಾದ ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಶಿವಮೊಗ್ಗ ಮೂಲದ ಸ್ವಾಮೀಜಿಯೊಬ್ಬರೂ ಕೊರೋನಾಗೆ ಬಲಿಯಾಗಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ ಕೈದಿಗಳಿಗೂ ಕೊರೋನಾ!
ಬುಧವಾರ 1076 ಮಂದಿ ಕೊರೋನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 18466 ಮಂದಿ ಗುಣಮುಖರಾಗಿದ್ದಾರೆ. ಇನ್ನು 597 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 27853 ಆಕ್ಟಿವ್ ಕೇಸ್ ಗಳಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 47253 ಕ್ಕೆ ಏರಿಕೆಯಾಗಿದೆ.