Wednesday, July 6, 2022

ಬೆಂಗಳೂರಲ್ಲಿ 2036, ರಾಜ್ಯದಲ್ಲಿ 5072 ಮಂದಿಗೆ ಸೋಂಕು; 72 ಜನ ಸಾವು

Follow Us

ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90 ಸಾವಿರ ತಲುಪಿದೆ. ಶನಿವಾರ ರಾಜ್ಯದಲ್ಲಿ 5072 ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೇರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 2036 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43503ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 30 ಮಂದಿ ಬಲಿಯಾಗಿದ್ದಾರೆ.
ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ಶನಿವಾರ 2403 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 33750ಕ್ಕೇರಿದಂತಾಗಿದೆ. ಒಟ್ಟು 1804 ಮಂದಿ ಸಾವನ್ನಪ್ಪಿದ್ದು, 55388 ಸಕ್ರಿಯ ಪ್ರಕರಣಗಳಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...
- Advertisement -
error: Content is protected !!