Saturday, April 17, 2021

ಕೊರೋನಾ ಹೆಚ್ಚಳ; ರಾಜ್ಯದಲ್ಲಿ ಮತ್ತೆ 14 ದಿನಗಳ ಕ್ವಾರಂಟೈನ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆ ಮಾಡಿದ್ದು, ಹೊರ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ ವಿಧಿಸಲು ತೀರ್ಮಾನಿಸಿದೆ.
ಈ ಬಗ್ಗೆ ಟ್ವೀಟ್ ನಲ್ಲಿ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಮಹಾರಾಷ್ಟ್ರದಿಂದ ಬರುವವರಿಗೆ ಮಾತ್ರವಲ್ಲ, ಯಾವುದೇ ರಾಜ್ಯದಿಂದ ಬಂದವರು ಕೂಡ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಲೇಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ.
ಪ್ರಸ್ತುತ ಆದೇಶ ಹೊರಬೀಳುವ ಮುನ್ನ, ಮಹಾರಾಷ್ಟ್ರದಿಂದ ಬರುವವರಿಗೆ 7 ದಿನ ಕ್ವಾರಂಟೈನ್ ಹಾಗೂ 7 ದಿನ ಹೋಮ್ ಕ್ವಾರಂಟೈನ್ ಹಾಗೂ ಉಳಿದ ರಾಜ್ಯದಿಂದ ಬಂದವರಿಗೆ 7 ದಿನಗಳ ಹೋಮ್ ಕ್ವಾರಂಟೈನ್ ವಿಧಿಸಲು ಆದೇಶ ಹೊರಡಿಸಿತ್ತು. . ಆದರೆ ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರತೆ ಹೆಚ್ಚುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಮತ್ತೆ ಮೊದಲಿನಂತೆ 14 ದಿನಗಳ ಕ್ವಾರಂಟೈನ್ ನಿಯಮ ಜಾರಿಗೆ ತಂದಿದೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!