Saturday, April 17, 2021

ಕೊರೋನಾ ಹೆಚ್ಚಳ; ವಿಸ್ತೃತ ಚರ್ಚೆ ನಡೆಸಿದ ಮೋದಿ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿ ವಿಸ್ತೃತವಾಗಿ ಚರ್ಚಿಸಿದ್ದಾರೆ.
ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಪರಿಸ್ಥಿತಿ ಹಾಗೂ ನಿವಾರಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಪ್ರಧಾನಿ ಮಾಹಿತಿ ಪಡೆದುಕೊಂಡಿದ್ದಾರೆ.
ದೆಹಲಿ, ಮುಂಬೈ ಮತ್ತು ಅಹಮದಾಬಾದ್’ಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿದೆ. ಆಸ್ಪತ್ರೆಗಳು, ಹಾಸಿಗೆ, ವೈದ್ಯಕೀಯ ಸೌಲಭ್ಯ ಅಗತ್ಯತೆಗಳು, ತುರ್ತು ವೈದ್ಯಕೀಯ ನಿರ್ವಹಣೆ ಯೋಜನೆಯ ಬಗ್ಗೆ ಪ್ರಧಾನಿ ಮಾಹಿತಿ ಪಡೆದಿದ್ದಾರೆ.
ಜಿಲ್ಲಾಮಟ್ಟದಲ್ಲಿ ಕೊರೋನಾ ನಿರ್ಮೂಲನೆ ಮತ್ತು ಚಿಕಿತ್ಸೆಗೆ ಅಗತ್ಯ ಸೌಲಭ್ಯ ಒದಗಿಸಬೇಕು, ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಗೃಹಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!