Monday, April 12, 2021

ಕೊರೋನಾ ಅಬ್ಬರ; ಮತ್ತೆ ಕ್ವಾರಂಟೈನ್ ಅವಧಿ ಬದಲಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿರುವುದರಿಂದ ಕ್ವಾರಂಟೈನ್ ಸಮಯವನ್ನು ಮತ್ತೆ ಬದಲಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಅಂತಾರಾಜ್ಯದಿಂದ ಕರ್ನಾಟಕಕ್ಕೆ ಬರುವವರಿಗೆ ಇದ್ದ ಹೋಂ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಲಾಗಿದೆ.
ಭಾನುವಾರ ಒಂದೇ ದಿನ ರಾಜ್ಯದಲ್ಲಿ 1925 ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ಸರ್ಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆ ಮಾಡಿದೆ.
ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸಿದರೆ 14 ದಿನಗಳ ಕಾಲ ಕಡ್ಡಾಯವಾಗಿ ಹೋಂ ಕ್ವಾರಂಟೈನ್‌ನಲ್ಲಿರಬೇಕು. ಈ ಹಿಂದೆ ಇದ್ದ 7 ದಿನದ ಹೋಂ ಕ್ವಾರಂಟೈನ್ ನಿಯಮವನ್ನು ಬದಲಾವಣೆ ಮಾಡಲಾಗಿದೆ.
ಜನರು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸಿದರೆ 7 ದಿನದ ಸಾಂಸ್ಥಿಕ ಕ್ವಾರಂಟೈನ್, 7 ದಿನದ ಹೋಂ ಕ್ವಾರಂಟೈನ್‌ನಲ್ಲಿರಬೇಕಿತ್ತು. ಮಹಾರಾಷ್ಟ್ರ ಹೊರತುಪಡಿಸಿ ಬೇರೆ ರಾಜ್ಯದಿಂದ ಬಂದರೆ 7 ದಿನದ ಹೋಂ ಕ್ವಾರಂಟೈನ್‌ ಕಡ್ಡಾಯವಾಗಿತ್ತು.
ಆದರೆ ಈಗ ಯಾವುದೇ ರಾಜ್ಯದಿಂದ ಕರ್ನಾಟಕಕ್ಕೆ ಬಂದರೂ 14 ದಿನದ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ರೈಲು, ವಿಮಾನದ ಮೂಲಕ ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವವರು ಹೊಸ ಕ್ವಾರಂಟೈನ್ ನಿಯಮಗಳನ್ನು ತಿಳಿದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!