Saturday, October 16, 2021

ಹೆಚ್ಚಿದ ಗುಲಾಬ್ ಅಬ್ಬರ: ಇಬ್ಬರು‌ ಮೀನುಗಾರರ ಸಾವು, ಮಹಾರಾಷ್ಟ್ರದಲ್ಲಿ ಹೈ ಅಲರ್ಟ್

Follow Us

newsics.com

ಹೈದರಾಬಾದ್: ಗುಲಾಬ್ ಚಂಡಮಾರುತದ ಅಬ್ಬರಕ್ಕೆ ಬೋಟ್ ಸಮತೋಲನ‌ ಕಳೆದುಕೊಂಡಿದ್ದು, ಅದರಲ್ಲಿದ್ದ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದಾರೆ. ಒಬ್ಬರು ನಾಪತ್ತೆಯಾಗಿದ್ದಾರೆ.

ಉತ್ತರ ಕರಾವಳಿ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಪಲಸಾ ಗ್ರಾಮದ ಮೂವರು ಮೀನುಗಾರರು ಸುರಕ್ಷಿತವಾಗಿ ಈಜಿ ದಡ ಸೇರಿದ್ದಾರೆ. ಮೀನುಗಾರಿಕಾ ಸಚಿವ ಎಸ್. ಅಪ್ಪಲ ರಾಜು ರಕ್ಷಣಾ ಕಾರ್ಯಾಚರಣೆ ಆರಂಭಿಸುವಂತೆ ಸೂಚಿಸಿದ್ದಾರೆ.

ಗುಲಾಬ್ ಚಂಡಮಾರುತವು ಮುಂದಿನ ಮೂರು ಗಂಟೆಗಳಲ್ಲಿ ಇದು ಉತ್ತರ ಆಂಧ್ರಪ್ರದೇಶ ದಕ್ಷಿಣ ಒಡಿಶಾ ಕರಾವಳಿಯನ್ನು ಕಳಿಂಗಪಟ್ಟಣಂ ಮತ್ತು ಗೋಪಾಲಪುರ ನಡುವೆ ಹಾದುಹೋಗುವ ಸಾಧ್ಯತೆಯಿದೆ.

ಗುಲಾಬ್ ಚಂಡಮಾರುತದಿಂದ ಭೂಕುಸಿತ ಮುಂದುವರಿದಿದ್ದು, ಕಳಿಂಗಪಟ್ಟಣದಲ್ಲಿ ಹೆಚ್ಚಿನ ಗಾಳಿ ಬೀಸುತ್ತಿದೆ. ಮಹಾರಾಷ್ಟ್ರದ ಎಲ್ಲಾ 36 ಜಿಲ್ಲೆಗಳಿಗೆ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಮುನ್ಸೂಚನೆಯಂತೆ ಚಂದ್ರಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂಬೈ ಮತ್ತು ನೆರೆಯ ಜಿಲ್ಲೆಗಳಾದ ಥಾಣೆ, ಪಾಲ್ಘರ್ ಮತ್ತು ಇತರ 17 ಜಿಲ್ಲೆಗಳಲ್ಲಿ ಘಾಟ್ ಪ್ರದೇಶದಲ್ಲಿ ಬಿರುಗಾಳಿ, ಗುಡುಗು ಮತ್ತು ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ ರಾಯಗಢ, ರತ್ನಗಿರಿ, ಪುಣೆ, ಸತಾರ, ನಾಸಿಕ್, ಪರಭಾನಿ, ಲಾತೂರ್, ಹಿಂಗೋಲಿ, ನಾಂದೇಡ್, ಯಾವತ್ಮಲ್, ಗಡ್ಚಿರೋಲಿಯಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...
- Advertisement -
error: Content is protected !!