Wednesday, July 6, 2022

ವಾಸ್ತವ ನಿಯಂತ್ರಣ ರೇಖೆಯಿಂದ ಹಿಂದೆ ಸರಿಯದ ಚೀನಾ; ಚಳಿಗಾಲ ಎದುರಿಸಲು ಭಾರತ ಸಿದ್ಧತೆ

Follow Us

ನವದೆಹಲಿ: ವಾಸ್ತವ ನಿಯಂತ್ರಣ ರೇಖೆಯಲ್ಲಿ ಸೇನಾ ಹಿಂತೆಗೆತಕ್ಕೆ ಸಂಬಂಧಿಸಿದಂತೆ ಚೀನಾ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಭಾರತಕ್ಕೆ ನೀಡಿದ ಭರವಸೆಗೆ ವ್ಯತಿರಿಕ್ತವಾಗಿ ವಾಸ್ತವ ನಿಯಂತ್ರಣ ರೇಖೆಯ ಕೆಲವು ಪ್ರದೇಶಗಳಲ್ಲಿ ತನ್ನ ನೆಲೆಗಳನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಭಾರತ ಕೂಡ ಪ್ರತಿತಂತ್ರ ಹೆಣೆದಿದೆ.

ಚಳಿಗಾಲದಲ್ಲಿ ಕೂಡ ಪೂರ್ವ ಲಡಾಕಿನ ಗಡಿ ಭಾಗದಲ್ಲಿ ಹೆಚ್ಚುವರಿ ಸೇನೆ ನಿಯೋಜಿಸಲು ಭಾರತ ಸಿದ್ಧತೆ ನಡೆಸಿದೆ. ಚಳಿಗಾಲದಲ್ಲಿ ಸೈನಿಕರಿಗೆ ಅಗತ್ಯ ಇರುವ ವಸ್ತುಗಳನ್ನು ಖರೀದಿಸಲು ಮುಂದಾಗಿದೆ. ಮೈ ಕೊರೆಯುವ ಹಿಮ ಚಳಿಯ ಆಘಾತ ಎದುರಿಸಲು ಶಕ್ತವಾಗಿರುವ ಉಡುಪುಗಳನ್ನು ಖರೀದಿಸಲಾಗುತ್ತಿದೆ.

ಇಲ್ಲಿ ತಾಪಮಾನ ಮೈನಸ್ 20 ಡಿಗ್ರಿಗೆ ಇಳಿಯುತ್ತಿದೆ. ಇದು ನಿಜವಾದ ಸವಾಲಾಗಿದೆ. ಭಾರತಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳದ ಚೀನಾ ದುಷ್ಟ ಸಂಚು ಹೂಡುತ್ತಿದೆ ಎಂಬ ಸಂಶಯವನ್ನು ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಉಭಯ ದೇಶಗಳ ಸೇನಾ ಕಮಾಂಡರ್ ಗಳ ಮಟ್ಟದ ಮಾತುಕತೆ ಇಂದು ಆರಂಭವಾಗಲಿದೆ. ಮೋಲ್ಡೊದಲ್ಲಿ ಮಾತುಕತೆ ನಡೆಯಲಿದ್ದು, ಚೀನಾದ ಪ್ರತಿಕ್ರಿಯೆ ಪರಿಗಣಿಸಿ ಭಾರತ ಮುಂದಿನ ಕ್ರಮ ತೆಗೆದುಕೊಳ್ಳಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!