newsics.com
ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.
ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಶನಿವಾರ ಇಂಡಿಗೋ ಸಂಸ್ಥೆಯ ಶೇ.55ರಷ್ಟು ವಿಮಾನಯಾನ ಅಸ್ತವ್ಯಸ್ತಗೊಂಡಿತ್ತು. ಇಂಡಿಗೋ ವಿಮಾನ ಕಂಪನಿಯ ಸಿಬ್ಬಂದಿ ಸಂದರ್ಶನಕ್ಕೆ ತೆರಳಿದ್ದರು. ಹೀಗಾಗಿ, ಗೈರುಹಾಜರಾಗಿದ್ದವರು ಅನಾರೋಗ್ಯದ ಕಾರಣ ನೀಡಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ.
ಇಂಡಿಗೋ ವಿಮಾನ ಸಂಸ್ಥೆ 1,600 ವಿಮಾನ ಸಂಚಾರವನ್ನು ನಡೆಸುತ್ತದೆ. ಸಿಬ್ಬಂದಿ ಸಂದರ್ಶನಕ್ಕೆ ತೆರಳಿದ್ದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಸಂಸ್ಥೆ ತಿಳಿಸಿದೆ.
ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮುಖ್ಯಸ್ಥ ಅರುಣ್ ಕುಮಾರ್ ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.