newsics.com
ಬೆಂಗಳೂರು: ಚಂದ್ರಯಾನ 3ರ ಯಶಸ್ಸಿನ ಬೆನ್ನಲ್ಲೇ ಇಸ್ರೊ ಮತ್ತೊಂದು ಮಹತ್ವದ ಹೆಜ್ಹೆ ಇರಿಸಿದ್ದು, ಸೂರ್ಯನನ್ನು ಅಧ್ಯಯನ ಮಾಡಲು ಮುಂದಾಗಿದೆ.
ಸೆಪ್ಟೆಂಬರ್2 ರಂದು ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಆದಿತ್ಯ ಎಲ್–1’ ಉಡಾವಣೆ ಮಾಡುವುದಾಗಿ ಇಸ್ರೊ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ವೀಕ್ಷಕರಿಗೂ ಈ ಉಡಾವಣೆಯನ್ನು ನೇರವಾಗಿ ವೀಕ್ಷಿಸಲು ಸಂಸ್ಥೆ ಅವಕಾಶ ನೀಡಿದ್ದು, ನೋಂದಣಿ ಮಾಡಿಕೊಂಡು ಶ್ರೀಹರಿಕೋಟಾಕ್ಕೆ ಬರುವಂತೆ ಆಹ್ವಾನಿಸಿದೆ.
ಸೆಪ್ಟೆಂಬರ್ ಮೊದಲ ವಾರದಲ್ಲಿ ಸೂರ್ಯನ ಅಧ್ಯಯನದ ‘ಆದಿತ್ಯ-ಎಲ್1’ ಯೋಜನೆ ಕೈಗೊಳ್ಳಲಿದ್ದು, ಇನ್ನೆರಡು ದಿನಗಳಲ್ಲಿ ದಿನಾಂಕ ಘೋಷಿಸುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಅಧ್ಯಕ್ಷ ಎಸ್. ಸೋಮನಾಥ್ ಹೇಳಿದ್ದರು.
https://twitter.com/isro/status/1696097793616793910?t=G-yxk4NxUJNfiOuvieXxYQ&s=08