Tuesday, April 13, 2021

ಜಡ್ಜ್, ವಕೀಲರಿಗೆ ಸುಪ್ರೀಂಕೋರ್ಟ್’ನಿಂದ ‘ವಸ್ತ್ರಸಂಹಿತೆ’ ಜಾರಿ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳು ಹಾಗೂ ವಕೀಲರಿಗೆ ಸುಪ್ರೀಂಕೋರ್ಟ್ ಶೀಘ್ರದಲ್ಲೇ ‘ವಸ್ತ್ರಸಂಹಿತೆ’ ನೀತಿ ಜಾರಿಗೊಳಿಸಲಿದೆ.
ವಕೀಲರು, ಜಡ್ಜ್ ಗಳು ನಿಲುವಂಗಿ ಧರಿಸದಂತೆ ಶೀಘ್ರದಲ್ಲೇ ಮಾರ್ಗಸೂಚಿ ಪ್ರಕಟಿಸಲಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ತಿಳಿಸಿದ್ದಾರೆ.
ಗುರುವಾರ ಸುಪ್ರೀಂ ಕೋರ್ಟಿನಲ್ಲಿ ಪ್ರಕರಣವೊಂದರ ವಿಚಾರಣೆ ನಡೆಯುತ್ತಿದ್ದ ವೇಳೆ ಮುಖ್ಯ ನ್ಯಾಯಮೂರ್ತಿ ಬೋಬ್ಡೆ, ನ್ಯಾಯಮೂರ್ತಿಗಳಾದ ಇಂದು ಮಲ್ಹೋತ್ರಾ, ಹೃಷಿಕೇಶ್‌ ರಾಯ್‌ ನೇತೃತ್ವದ ಪೀಠದ ಮುಂದೆ ವಕೀಲ ಕಪಿಲ್‌ ಸಿಬಲ್‌, ‘ಈ ಪೀಠದಲ್ಲಿ ನ್ಯಾಯಮೂರ್ತಿಗಳ ನಿಲುವಂಗಿ ಇಲ್ಲ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಬೋಬ್ಡೆ, ಕೋವಿಡ್ ಸೋಂಕು ತಡೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಡ್ಜ್ ಗಳು, ವಕೀಲರು ನಿಲುವಂಗಿ ಧರಿಸದಂತೆ ಶೀಘ್ರ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಈ ಮಧ್ಯೆ, ಸುಪ್ರೀಂಕೋರ್ಟ್‌ ತನ್ನ ಏಳು ವಾರ ಅವಧಿಯ ಬೇಸಿಗೆ ರಜೆಯನ್ನು ಕಡಿತ ಮಾಡಿದೆ. ಮೇ 17ರ ಬಳಿಕ ನ್ಯಾಯಾಲಯದ ಕಾರ್ಯಚಟುವಟಿಕೆಗಳು ಆರಂಭವಾಗಲಿವೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!