Thursday, May 26, 2022

ವಿವಾದಕ್ಕೊಳಗಾದ ಕಮಲ್ ಹಾಸನ್ ಪಾತಾಳ‌ ಹಾಡು: ದೂರು ದಾಖಲು

Follow Us

newsics.com

ಚೆನ್ನೈ: ತಮಿಳು ನಟ ಕಮಲ್ ಹಾಸನ್ ಅಭಿನಯದ ‘ವಿಕ್ರಮ್’ ಸಿನಿಮಾದ ‘ಪಾತಾಳ’ ಹಾಡು ವಿವಾದಕ್ಕೊಳಗಾಗಿದೆ.

ಪಾತಾಳ ಪಾತಾಳ ಎಂದು ಆರಂಭವಾಗುವ ಈ ಹಾಡಿನಲ್ಲಿ ಕೇಂದ್ರ ಸರ್ಕಾರವನ್ನು ಅಣಕಿಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಈಗಾಗಲೇ ಈ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದೆ.

ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಕಮಲ್ ಹಾಸನ್ ಅವರೇ ಬರೆದಿದ್ದು, ಮೇ 11ರಂದು ಈ ಹಾಡು ಬಿಡುಗಡೆಯಾಗಿದೆ. ಯುಟ್ಯೂಬ್‌ನಲ್ಲಿ ಈ ಹಾಡನ್ನು ಈವರೆಗೆ 2 ಕೋಟಿ 62 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, 8.47 ಲಕ್ಷ ಮಂದಿ ಲೈಕ್ ಮಾಡಿದ್ದಾರೆ.

ರೋಗಗಳು ಹೆಚ್ಚುತ್ತಿರುವ ಈ ಸಮಯದಲ್ಲಿ ಖಜಾನೆಯಲ್ಲಿ ಹಣ ಉಳಿದಿಲ್ಲ. ಕೇಂದ್ರ ಸರ್ಕಾರದ ತಪ್ಪುಗಳಿಂದಾಗಿ ಈಗ ಏನೂ ಉಳಿದಿಲ್ಲ. ಕೀ ಈಗ ಕಳ್ಳನ ಬಳಿ ಇದೆ ಎಂಬರ್ಥದಲ್ಲಿ ಈ ಹಾಡಿನ ಸಾಹಿತ್ಯವಿದೆ‌.

ಈ ಹಾಡಿನ ವಿರುದ್ಧ ಈಗಾಗಲೇ ಸಾಮಾಜಿಕ ಕಾರ್ಯಕರ್ತ ಸೆಲ್ವಂ ದೂರು ದಾಖಲಿಸಿದ್ದಾರೆ. ಹಾಡಿನ ಈ ಸಾಲುಗಳನ್ನು ತೆಗೆಸಲು ಪೊಲೀಸರು ಕ್ರಮ‌ ಕೈಗೊಳ್ಳದಿದ್ದರೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ತ್ರಿಪುರ ಸಿಎಂ ಸ್ಥಾನಕ್ಕೆ ಬಿಪ್ಲಬ್​ ಕುಮಾರ್​ ದೇಬ್​ ರಾಜೀನಾಮೆ

ದಿ.ಪಾರ್ವತಮ್ಮ ರಾಜ್​ಕುಮಾರ್​ ಸಹೋದರಿ ವಿಧಿವಶ

ಯುಎಇ ನೂತನ ಅಧ್ಯಕ್ಷರಾಗಿ ಶೇಖ್​ ಖಲೀಫಾ ಬಿನ್​​ ಜಾಯೆದ್​​ ಅಲ್​ ನಹ್ಯಾನ್ ಆಯ್ಕೆ

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!