newsics.com
ಜಗಳೂರು: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದಲ್ಲಿ ಕಳೆದ 20 ದಿನಗಳಿಂದ ನಿಗೂಢ ಜ್ವರದಿಂದ 100ಕ್ಕೂ ಹೆಚ್ಚು ಮಂದಿ ಬಳಲುತ್ತಿರುವುದು ವರದಿಯಾಗಿದೆ.
ಕಾನನಕಟ್ಟೆ ಗ್ರಾಮದ ವ್ಯಾಪ್ತಿಯಲ್ಲಿ ಒಂದು ಸಾವಿರಕ್ಕೂ ಅಧಿಕ ಜನಸಂಖ್ಯೆ ಇದ್ದು, ಗ್ರಾಮದ ಪ್ರತಿಯೊಂದು ಮನೆಯಲ್ಲೂ ಜನ ನಿಗೂಢ ಜ್ವರದಿಂದ ಬಳಲುತ್ತಿದ್ದಾರೆ.
ಜ್ವರ, ಕಾಲುನೋವು, ಮೂಗಿನ ಹತ್ತಿರ ಕಪ್ಪು ಕಲೆ, ಕೈಕಾಲು ಬಾವು ಬರುವುದು, ಚರ್ಮದ ಪೊರೆ ಸುಲಿಯುವುದು, ಗುಳ್ಳೆಗಳು, ಸುಸ್ತು ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ.
ಸೊಳ್ಳೆ ಕಾಟ ಹಾಗೂ ಗ್ರಾಮಕ್ಕೆ ಸರಬರಾಜಾಗುತ್ತಿರುವ ನೀರು ಸೇವನೆಯಿಂದ ಈ ರೀತಿ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.