Tuesday, July 5, 2022

ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್: ರಾಜ್ಯಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ‌ ನಾಮಪತ್ರ

Follow Us

newsics.com
ನವದೆಹಲಿ: ಮೇ 16ರಂದೇ ಕಾಂಗ್ರೆಸ್‌ ತೊರೆದಿರುವುದಾಗಿ ಸ್ಪಷ್ಟಪಡಿಸಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಕಪಿಲ್ ಸಿಬಲ್, ಬುಧವಾರ ರಾಜ್ಯಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷವು ಅವರ ಬೆನ್ನಿಗೆ ನಿಂತಿದೆ.
ಕಾಂಗ್ರೆಸ್‌ನ ಭಿನ್ನಮತೀಯ ಗುಂಪು ‘ಜಿ23’ರಲ್ಲಿ ಪ್ರಮುಖರಾಗಿದ್ದ ಸಿಬಲ್‌ ಅವರು ಪಕ್ಷದ ಪುನರ್‌ರಚನೆಗೆ ಒತ್ತಾಯಿಸಿದ್ದರು.
ಉತ್ತರ ಪ್ರದೇಶದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರ ಕಾಲಾವಧಿ ಜುಲೈಗೆ ಕೊನೆಯಾಗಲಿದೆ.
ನಾನು ಕಾಂಗ್ರೆಸ್‌ ಮುಖಂಡನಾಗಿದ್ದೆ. ಕಾಂಗ್ರೆಸ್‌ಗೆ ಮೇ 16ರಂದು ರಾಜೀನಾಮೆ ಸಲ್ಲಿಸಿದ್ದೇನೆ. ಕಾಂಗ್ರೆಸ್‌ ಪಕ್ಷದ ಕುರಿತು ನಾನು ಏನನ್ನೂ ಹೇಳುವುದಿಲ್ಲ…ಯಾವುದೇ ಮಾತನ್ನು ಆಡುವುದೂ ನನಗೆ ಸರಿ ಕಾಣುತ್ತಿಲ್ಲ. 30–31 ವರ್ಷಗಳ ಸುದೀರ್ಘ ಸಂಬಂಧವನ್ನು ಕಳಚಿಕೊಳ್ಳುವುದು ಸುಲಭದ ಸಂಗತಿಯಲ್ಲ ಎಂದು ನಾಮಪತ್ರ ಸಲ್ಲಿಕೆ ವೇಳೆ ಕಪಿಲ್ ಸಿಬಲ್ ಹೇಳಿದ್ದಾರೆ.
ನಾನೀಗ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ದೇಶದಲ್ಲಿ ಸದಾ ಸ್ವತಂತ್ರ ಅಭ್ಯರ್ಥಿಯಾಗಲು ಬಯಸುತ್ತೇನೆ…ಅದು ಮುಖ್ಯವೂ ಆಗಿದೆ. ವಿರೋಧ ಪಕ್ಷದಲ್ಲಿದ್ದಾಗ ನಾವು ಮೈತ್ರಿ ಮಾಡಿಕೊಳ್ಳುವ ಮೂಲಕ ಮೋದಿ ಸರ್ಕಾರವನ್ನು ವಿರೋಧಿಸುವ ಪ್ರಯತ್ನ ನಡೆಸಿದೆವು’
‘ಪಕ್ಷದ ಸದಸ್ಯರಾಗಿ ನಾವು ಆ ಪಕ್ಷದ ಶಿಸ್ತಿಗೆ ಒಳಪಟ್ಟಿರುತ್ತೇವೆ. ಆದರೆ, ಸ್ವತಂತ್ರ ದನಿಯನ್ನು ಹೊಂದಿರುವುದು ಮುಖ್ಯವಾಗುತ್ತದೆ. ಅಖಿಲೇಶ್‌ ಯಾದವ್‌ ಅವರಿಗೆ ಆಭಾರಿಯಾಗಿದ್ದೇನೆ…ನಾವು, ಹಲವು ಜನರು 2024ರ ಚುನಾವಣೆಗಾಗಿ ಒಗ್ಗೂಡಿದ್ದೇವೆ. ಜನರ ಮುಂದೆ ನಮ್ಮ ಎಲ್ಲರ ಅಭಿಪ್ರಾಯಗಳನ್ನು ತೆರೆದಿಡಲಿದ್ದೇವೆ. ಕೇಂದ್ರ ಸರ್ಕಾರದ ದೋಷಗಳನ್ನು ಬಿಡಿಸಿಡಲಿದ್ದೇವೆ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು...

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ  ಕೊಲೆ ಮಾಡಲಾಗಿದೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ...

ಜೇಮ್ಸ್ ಚಿತ್ರ ನಿರ್ಮಾಪಕ ಕಿಶೋರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

newsics.com ಬೆಂಗಳೂರು: ಕನ್ನಡಿಗರ ಕಣ್ಮಣಿ ಪುನೀತ್ ರಾಜ್  ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅಸ್ವಸ್ಥರಾಗಿದ್ದಾರೆ. ಹೆಚ್ಚಿನ ರಕ್ತದ ಒತ್ತಡದ ಪರಿಣಾಮ ಸ್ಟ್ರೋಕ್ ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ...
- Advertisement -
error: Content is protected !!