Tuesday, July 5, 2022

2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

Follow Us

newsics.com

ಬೆಂಗಳೂರು: 2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು ಇಂದು ಮಧ್ಯಾಹ್ನ 1 ಗಂಟೆಯ ಬಳಿಕ ವೆಬ್​ಸೈಟ್​ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಈ ವರ್ಷ ರಾಜ್ಯದಲ್ಲಿ 8.07ಲಕ್ಷ ಮಂದಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. 3,58,602 ಮಂದಿ ವಿದ್ಯಾರ್ಥಿಗಳು ಈ ಬಾರಿ ಉತ್ತೀರ್ಣರಾಗಿದ್ದಾರೆ. ಈ ಬಾರಿ 4.4 ಲಕ್ಷ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು ಇದರಲ್ಲಿ 3.72 ಲಕ್ಷ ವಿದ್ಯಾರ್ಥಿನಿಯರು ಉತ್ತೀರ್ಣರಾಗುವ ಮೂಲಕ ಮೇಲುಗೈ ಸಾಧಿಸಿದ್ದಾರೆ.

ಈ ಬಾರಿ ಗ್ರೇಡ್​ ವ್ಯವಸ್ಥೆ ಮಾಡಲಾಗಿದ್ದು 32 ಜಿಲ್ಲೆಗಳು ಎ ಗ್ರೇಡ್​ ಸಂಪಾದಿಸಿದ್ದರೆ, ಬೆಂಗಳೂರು ದಕ್ಷಿಣ ಹಾಗೂ ಯಾದಗಿರಿ ಬಿ ಗ್ರೇಡ್​ನಲ್ಲಿವೆ . 145 ವಿದ್ಯಾರ್ಥಿಗಳು ಈ ಬಾರಿ 645ಕ್ಕೆ 645 ಅಂಕ ಗಳಿಸುವ ಮೂಲಕ ದಾಖಲೆ ಬರೆದಿದ್ದಾರೆ.309 ವಿದ್ಯಾರ್ಥಿಗಳು 644 ಅಂಕಗಳನ್ನು ಗಳಿಸಿದ್ದಾರೆ. ಈ ಬಾರಿ 85.63 ಪ್ರತಿಶತ ದಾಖಲಾಗಿದೆ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳು

vertical

Latest News

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ  ಕೊಲೆ ಮಾಡಲಾಗಿದೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ...
- Advertisement -
error: Content is protected !!