ಆಲ್ಮಟಿ: ಕಜಕಿಸ್ತಾನದ ಅಲ್ಮಟಿ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಕಟ್ಟಡಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ. ವಿಮಾನದಲ್ಲಿ 100 ಮಂದಿ ಪ್ರಯಾಣಿಸುತ್ತಿದ್ದರು. ಇದುವರೆಗೆ 10 ಮಂದಿ ಸಾವನ್ನಪ್ಪಿರುವುದನ್ನು ದೃಢೀಕರಿಸಲಾಗಿದೆ. ಬೆಕ್ ಎರ್ ಲೈನ್ಸ್ ಗೆ ಸೇರಿದ ವಿಮಾನ ಇದಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.