Saturday, November 27, 2021

ಕೇರಳ ಯುವಕರಿಂದ ಪೊಲೀಸರ ಮೇಲೆ ಕಲ್ಲು ತೂರಾಟ

Follow Us

ಮಂಗಳೂರು: ಕೇರಳ ಮೂಲದ ಅಪರಿಚಿತ ಯುವಕರು ಗಡಿಯಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದಾರೆ.
ಸುಳ್ಯದ ಪೊಲೀಸ್ ಸಿಬ್ಬಂದಿ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದು, ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ, ಕೇರಳ ಕಡೆಯಿಂದ ವಾಹನದಲ್ಲಿ ಬಂದ ಯುವಕರ ತಂಡ ಕರ್ನಾಟಕ ಪ್ರವೇಶ ಮಾಡಲು ಪ್ರಯತ್ನ ನಡೆಸಿತು, ಆಗ ಪೊಲೀಸರು ತಡೆದರು. ಆಗ ಆಕ್ರೋಶಗೊಂಡ ಯುವಕರ ತಂಡ ಪೊಲೀಸರ ಮೇಲೆ ಕಲ್ಲು ತೂರಿ ಪರಾರಿಯಾಗಿದೆ.
ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ ಕೇರಳದ ಜತೆಗಿನ ಗಡಿಯನ್ನು ಬಂದ್ ಮಾಡಿದೆ. ಆದರೆ ಕೇರಳ ಸರ್ಕಾರ ಕರ್ನಾಟಕ-ಕೇರಳ ಗಡಿಯಲ್ಲಿ ವಾಹನ ಸಂಚರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!