ನವದೆಹಲಿ: ಮಥುರಾದಲ್ಲಿರುವ ಶ್ರೀಕೃಷ್ಣ ದೇವಸ್ಥಾನಕ್ಕೆ ಸೇರಿದ ಎಲ್ಲ ಭೂಮಿಯನ್ನು ದೇವಸ್ಥಾನಕ್ಕೆ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30ರಂದು ವಿಚಾರಣೆ ನಡೆಸಲಿದೆ.
ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಬೇಕೇ ಬೇಡವೆ ಎಂಬ ಕುರಿತು ಸೆಪ್ಟೆಂಬರ್ 30ರಂದು ಸರ್ವೋಚ್ಚ ನ್ಯಾಯಾಲಯ ನಿರ್ಧರಿಸಲಿದೆ. ಮೊಗಲರ ಆಡಳಿತಾವಧಿಯಲ್ಲಿ ಮಥುರಾದ ಕೃಷ್ಣ ದೇವಸ್ಥಾನದ ಭೂಮಿಯನ್ನು ವಶಪಡಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.