ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ನಾಳೆ (ಫೆ,20) ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಫೆ.20 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರು ಮತ್ತು ಅವರ ಕುಟುಂಬದವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ನೇತೃತ್ವದಲ್ಲಿ ಹೋರಾಟ ಕೈಗೊಳ್ಳಲಾಗಿದೆ. ರಾಜ್ಯ ರಸ್ತೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ನಾಳೆ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆ; ಬಸ್ ಸಂಚಾರ ವ್ಯತ್ಯಯ ಸಾಧ್ಯತೆ
Follow Us