Tuesday, April 13, 2021

ಭೂಕುಸಿತ, ಒಂದೇ ಕುಟುಂಬದ ನಾಲ್ವರ ಸಾವು

ಇಟಾನಗರ: ಅರುಣಾಚಲಪ್ರದೇಶದಲ್ಲಿ ಶುಕ್ರವಾರ ಭಾರೀ ಭೂಕುಸಿತ ಸಂಭವಿಸಿ 8 ತಿಂಗಳ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರು ಕೊನೆಯುಸಿರೆಳೆದಿದ್ದಾರೆ.
ಕೆಲ ದಿನಗಳಿಂದ ಅರುಣಾಚಲಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಶುಕ್ರವಾರ ಮಧ್ಯಾಹ್ನ ಪಪುಂಪರೆ ಜಿಲ್ಲೆಯ ತಿಗ್ದೋ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಒಂದೇ ಕುಟುಂಬದ ನಾಲ್ವರು ಅಸುನೀಗಿದ್ದಾರೆ. ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಜೀವಂತ ಸಮಾಧಿಯಾಗಿದ್ದಾರೆ. ವಿಷಯ ತಿಳಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ. ದುರಂತದ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಸಿಎಂ ಖಂಡು, ಮೃತ ಕುಟುಂಬಸ್ಥರಿಗೆ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!