newsics.com
ಮುಂಬೈ (ಮಹಾರಾಷ್ಟ್ರ): ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಸಾವಿನ ವದಂತಿ ಜೋರಾಗಿರುವ ಬೆನ್ನಲ್ಲೇ, ಲತಾ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದೆ ಎಂದು ವೈದ್ಯರು ಹೇಳಿದ್ದಾರೆ.
ಲತಾ ಅವರ ಆರೋಗ್ಯದಲ್ಲಿ ತುಸು ಚೇತರಿಕೆಯಿದ್ದರೂ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರು ಶನಿವಾರ ತಿಳಿಸಿದ್ದಾರೆ.
ಜನವರಿ 9ರಂದು ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಲತಾ ಮಂಗೇಶ್ಕರ್ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.
ಲತಾ ಮಂಗೇಶ್ಕರ್ ಅವರ ಆರೋಗ್ಯ ಸುಧಾರಿಸುತ್ತಿದೆ. ಆದರೆ, ಅವರು ಎಷ್ಟು ದಿನ ಆಸ್ಪತ್ರೆಯಲ್ಲಿರುತ್ತಾರೆ ಎಂದು ಹೇಳುವುದು ಕಷ್ಟ ಎಂದು ಆಸ್ಪತ್ರೆಯ ಸಹ ಪ್ರಾಧ್ಯಾಪಕಿ ಡಾ. ಪ್ರತೀತ್ ಸಮ್ದಾನಿ ಹೇಳಿದ್ದಾರೆ.
ಈ ಮಧ್ಯೆ, ಅವರ ಆರೋಗ್ಯದ ಕುರಿತ ಸುಳ್ಳು ಸುದ್ದಿ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಮನವಿ ಮಾಡಿರುವ ಲತಾ ಮಂಗೇಶ್ಕರ್ ಅವರ ವಕ್ತಾರರು, ಲತಾ ದೀದಿ ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಮನೆಗೆ ಮರಳಲು ಪ್ರಾರ್ಥಿಸೋಣ ಎಂದಿದ್ದಾರೆ.
ಪ್ರಬಲ, ವೇಗವಾಗಿ ಹರಡಬಲ್ಲ ಕೊರೋನಾ ರೂಪಾಂತರಿ ಉಪ ಪ್ರಬೇಧ ಪತ್ತೆ: ಹೆಚ್ಚಿದ ಆತಂಕ
ಕಲ್ಯಾಣಮಂಟಪಕ್ಕೆ ಡಾನ್ಸ್ ಮಾಡುತ್ತಾ ವಧು ಎಂಟ್ರಿ, ವರನಿಂದ ಕಪಾಳಮೋಕ್ಷ , ಮದುವೆಗೆ ಮೊದಲೇ ಬ್ರೇಕ್ ಅಪ್