Sunday, December 5, 2021

ಮೇ 3ರ ವರೆಗೆ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ

Follow Us

ನವದೆಹಲಿ: ಕೊರೋನಾ ತಡೆಗಟ್ಟುವ ಸಂಬಂಧ ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ನ್ನು ಮೇ ಮೂರರ ವರೆಗೆ ವಿಸ್ತರಿಸಲಾಗಿದೆ. ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಇದನ್ನು ಪ್ರಕಟಿಸಿದ್ದಾರೆ. ಈ ಸಂಬಂಧ ನಾಳೆ ಸಮಗ್ರ ಮಾರ್ಗಸೂಚಿ ಪ್ರಕಟಿಸುವುದಾಗಿಯೂ ಅವರು ತಿಳಿಸಿದ್ದಾರೆ. ಏಪ್ರಿಲ್ 20 ರ ತನಕ ಇನ್ನಷ್ಟು ಕಠಿಣ ರೀತಿಯಲ್ಲಿ ನಿರ್ಬಂಧ ಮುಂದುವರಿಯಲಿದೆ. ಇದೇ ವೇಳೆ, ಹಲವು ಕ್ಷೇತ್ರಗಳಿಗೆ ರಿಯಾಯಿತಿ ನೀಡಲು ಸರ್ಕಾರ ನಿರ್ಧರಿಸಿದ್ದು, ನಾಳೆ ಪ್ರಕಟಗೊಳ್ಳುವ ಮಾರ್ಗ ಸೂಚಿಯಲ್ಲಿ ಈ ಎಲ್ಲ ಅಂಶಗಳು ಇರಲಿವೆ ಎಂದು ಪ್ರಧಾನಿ ಹೇಳಿದರು. ದಿನಗೂಲಿ ನೌಕರರ ಕಲ್ಯಾಣಕ್ಕೆ ಸರ್ಕಾರ ಸಂಕಲ್ಪ ಬದ್ದವಾಗಿದ್ದು,  ಅವರ ಕಲ್ಯಾಣಕ್ಕೆ ವಿಶೇಷ ಕಾರ್ಯಕ್ರಮ ಪ್ರಕಟಿಸಲಾಗುವುದು ಎಂದು ಪ್ರಧಾನಿ ತಿಳಿಸಿದರು.  ಏಪ್ರಿಲ್ 20ರ  ಒಳಗೆ ದೇಶದಲ್ಲಿ ಹಾಟ್ ಸ್ಪಾಟ್ ಗಳನ್ನು ಗುರುತಿಸಿ ಅಲ್ಲಿ ರೋಗ ನಿಯಂತ್ರಣಕ್ಕೆ  ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಯಶಸ್ವಿಯಾದರೆ  ರೋಗ ಕಡಿಮೆ ಸಂಖ್ಯೆಯಲ್ಲಿ ವರದಿಯಾಗಿರುವ ಪ್ರದೇಶಗಳಿಗೆ ವಿನಾಯಿತಿ ನೀಡುವ ಸೂಚನೆಯನ್ನು ಕೂಡ   ಪ್ರಧಾನಿ ನೀಡಿದರು.  ಕೊರೋನಾ ತಡೆಗೆ ದೇಶದ ವಿಜ್ಞಾನಿಗಳು ಕೈ ಜೋಡಿಸಿದ್ದು, 220 ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಲಸಿಕೆ ಅಭಿವೃದ್ದಿಪ಼ಡಿಸುವುದರಲ್ಲಿ ನಿರತರಾಗಿದ್ದಾರೆ ಎಂದು ಪ್ರಧಾನಿ ಶ್ಲಾಘಿಸಿದರು.  ಲಾಕ್ ಡೌನ್ ನಿಂದ ತೊಂದರೆಯಾಗಿದೆ. ಇದನ್ನು ಒಪ್ಪಿಕೊಳ್ಳುತ್ತೇನೆ. ಆದರೆ,  ಜನರ ಪ್ರಾಣ ರಕ್ಷಣೆಯೇ ಮೊದಲ ಆದ್ಯತೆಯಾಗಿದೆ. ಇದಕ್ಕೆ ಸರ್ಕಾರ ಸಂಕಲ್ಪ ಬದ್ದವಾಗಿದೆ ಎಂದು ಪ್ರಧಾನಿ ಹೇಳಿದರು.  ಲಾಕ್ ಡೌನ್ ಅವಧಿಯಲ್ಲಿ ಬಡವರ ಕಾಳಜಿ ವಹಿಸುವಂತೆ ಕರೆ  ನೀಡಿದ ಪ್ರಧಾನಿ ತಮ್ಮ ಭಾಷಣದ ಕೊನೆಯಲ್ಲಿ ಸಪ್ತ ಸೂತ್ರಗಳನ್ನು ಪಾಲಿಸುವಂತೆ ಜನರಿಗೆ ಕರೆ ನೀಡಿದರು.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!