Saturday, April 17, 2021

ಲಾಕ್ ಡೌನ್; ಶೈಕ್ಷಣಿಕ ವರ್ಷ ಅವಧಿ ಕಡಿತ ಸಾಧ್ಯತೆ

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಈ ಸಾಲಿನ ಶೈಕ್ಷಣಿಕ ವರ್ಷ ಅವಧಿ ಕಡಿತವಾಗುವ ಸಾಧ್ಯತೆಯಿದೆ.
ಶೈಕ್ಷಣಿಕ ವರ್ಷ ಆರಂಭಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಈಗಾಗಲೇ ಶಿಕ್ಷಣ ಇಲಾಖೆ ಚಿಂತನೆ ಆರಂಭಿಸಿದ್ದು, ಈ ವರ್ಷ ಶೈಕ್ಷಣಿಕ ಅವಧಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ ಅದಕ್ಕೆ ತಕ್ಕಂತೆ ಪಠ್ಯಗಳನ್ನು ರೂಪಿಸಲು ಯೋಜಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇರುವ ಅವಧಿಗೆ ಅನುಗುಣವಾಗಿ ಪಠ್ಯಕ್ರಮ ಸಿದ್ಧಪಡಿಸುವಂತೆ ತಿಳಿಸಿದ್ದಾರೆ. ಒಂದರಿಂದ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಹೆಚ್ಚುವರಿಯಾಗಿರುವ ಪಠ್ಯವನ್ನು ಗುರುತಿಸಿ. ಮಕ್ಕಳ ಕಲಿಕೆಗೆ ಹೊರೆಯಾಗದಂತೆ ಅನಾವಶ್ಯಕ ಪುನರಾವರ್ತಿತ ಪಠ್ಯಗಳನ್ನು ಕಡಿತಗೊಳಿಸಿ ಅವಶ್ಯಕವಾದ ಪಠ್ಯ ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದು ಸಚಿವರು ತಿಳಿಸಿದ್ದಾರೆನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!