Thursday, December 2, 2021

ದೇಶಾದ್ಯಂತ ಮೇ 17ರವರೆಗೂ ಲಾಕ್ ಡೌನ್

Follow Us

ನವದೆಹಲಿ: ದೇಶಾದ್ಯಂತ ಮೇ 17ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಆದೇಶ ಹೊರಡಿಸಿರುವ ಕೇಂದ್ರ ಗೃಹ ಇಲಾಖೆ, ಮೇ 3ರ ನಂತರವೂ ಎರಡು ವಾರಗಳ ಕಾಲ ಲಾಕ್ ಡೌನ್ ಮುಂದುವರೆಸಿದ್ದು, ರೆಡ್ ಝೋನ್’ನಲ್ಲಿರುವ 130 ಜಿಲ್ಲೆಗಳಲ್ಲಿ ಯಥಾಸ್ಥಿತಿಯನ್ನು ಕಾಪಾಡುವಂತೆ ಸೂಚಿಸಿದೆ.
ಅಗತ್ಯ ವಸ್ತುಗಳ ಸರಬರಾಜು ಹಾಗೂ ಖರೀದಿಗೆ ಷರತ್ತುಬದ್ಧ ಅನುಮತಿ ನೀಡಿರುವ ಕೇಂದ್ರ ಸರ್ಕಾರ, ಇನ್ನುಳಿದಂತೆ ಯಾವುದೇ ವ್ಯವಹಾರ ನಡೆಸದಂತೆ ಸೂಚಿಸಿದೆ.
ಶಾಲಾ-ಕಾಲೇಜುಗಳಿಗೆ ಎಂದಿನಂತೆ ಲಾಕ್ ಡೌನ್ ಮುಗಿಯುವವರೆಗೂ ರಜೆ ಘೋಷಿಸಲಾಗಿದೆ. ಸಾರಿಗೆ ಸಂಚಾರಕ್ಕೆ ನಿರ್ಬಂಧವಿದ್ದು, ವಿಮಾನ, ರೈಲುಗಳ ಸಂಚಾರವೂ ಇರುವುದಿಲ್ಲ. ಗ್ರೀನ್ ಝೋನ್ ವಲಯದಲ್ಲಿ ಈಗಾಗಲೇ ಘೋಷಿಸಲಾಗಿರುವ ವಿನಾಯಿತಿಗಳು ಮುಂದುವರಿಯುತ್ತವೆ.
ಮೂರೂ ವಲಯಗಳಲ್ಲಿ ಹೋಟೆಲ್ ಗಳಲ್ಲಿ ಪಾರ್ಸೆಲ್ ನೀಡಲು ಮಾತ್ರ ಅವಕಾಶವಿದ್ದು, ಪಬ್, ಕ್ಲಬ್, ಚಿತ್ರಮಂದಿರ, ಮಾಲ್ ಗಳನ್ನು ತೆರೆಯುವುದಕ್ಕೆ ನಿರ್ಬಂಧ ಹೇರಲಾಗಿದೆ. ಕಾರಿನಲ್ಲಿ ಇಬ್ಬರು ಮಾತ್ರ ಪ್ರಯಾಣಿಸಲು ಅವಕಾಶವಿದ್ದು, ಬೈಕಿನಲ್ಲಿ ಒಬ್ಬರು ಮಾತ್ರ ಸಂಚಾರ ಮಾಡಬಹುದಾಗಿದೆ. ಆರೆಂಜ್ ಝೋನ್ ನಲ್ಲಿ ಕ್ಯಾಬ್ ಮತ್ತು ಟ್ಯಾಕ್ಸಿಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.
ಮಕ್ಕಳು ಮತ್ತು ವಯೋವೃದ್ಧರು ಮನೆಯಲ್ಲೇ ಇರುವಂತೆ ಸೂಚಿಸಲಾಗಿದ್ದು, ಉಳಿದವರು ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಹೊರಬರಬಹುದಾಗಿದೆ. ಗ್ರೀನ್ ಝೋನ್ ನಲ್ಲಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಿದೆ ಶೇಕಡಾ 50 ಸೀಟುಗಳನ್ನು ಮಾತ್ರ ಭರ್ತಿ ಮಾಡಬಹುದಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!