Tuesday, April 13, 2021

ಲಾಕ್’ಡೌನ್ ವಿಸ್ತರಣೆ; ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಗೊಂದಲ ಮುಂದುವರಿಕೆ

ಬೆಂಗಳೂರು: ಮೇ 31 ರವರೆಗೂ 4ನೇ ಹಂತದ ಲಾಕ್ ಡೌನ್ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಕುರಿತ ಗೊಂದಲ ಮುಂದುವರೆದಿದೆ.
ಶಿಕ್ಷಣ ಸಚಿವ ಸುರೇಶ ಕುಮಾರ್ ಅವರ ಹೇಳಿಕೆಯ ಪ್ರಕಾರ ನಾಳೆ (ಮೇ 18) ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಕುರಿತ ಗೊಂದಲ ಬಗೆಹರಿಯಬೇಕಿತ್ತು. ಅದೇ ರೀತಿ ಸಿಬಿಎಸ್ಇ ೧೦ ಮತ್ತು ೧೨ ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೇಳಿತ್ತು. ಆದರೆ ಈಗ ಲಾಕ್ ಡೌನ್ ಮುಂದುವರಿದಿರುವುದರಿಂದ ಪರೀಕ್ಷಾ ಗೊಂದಲವೂ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಲಾಕ್ ಡೌನ್ 4ನೇ ಹಂತದ ಮಾರ್ಗಸೂಚಿ ಪ್ರಕಾರ ಶಾಲಾ, ಕಾಲೇಜು, ಶೈಕ್ಷಣಿಕ ಚಟುವಟಿಕೆಗಳ ಮೇಲಿನ ನಿರ್ಬಂಧ ಮುಂದುವರೆಸಿದೆ. ಆದರೆ, ಪರೀಕ್ಷೆಗಳ ಬಗ್ಗೆ ಮಾರ್ಗಸೂಚಿಯಲ್ಲಿ ಯಾವುದೇ ಮಾಹಿತಿ ನೀಡಿಲ್ಲ.
ರಾಜ್ಯದಲ್ಲಿ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಮೇ 18 ರ ನಂತರ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದರು. ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದೂ ತಿಳಿಸಿದ್ದರು. ಆದರೆ ಪರೀಕ್ಷೆ ವೇಳಾಪಟ್ಟಿ ಗೊಂದಲವೇ ಇನ್ನೂ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ. ಪರೀಕ್ಷೆ ನಡೆಯುತ್ತದೆಯೇ ಇಲ್ಲವೆ ಎನ್ನುವುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲವಾಗಿದೆ. ಇದರಿಂದಾಗಿ ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಮತ್ತೆ ಆತಂಕ ಎದುರಾಗಿದೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸಿಬಿಎಸ್‌ಇ 10, 12 ನೇ ಪರೀಕ್ಷೆಗೆ ಮೇ 18 ರಂದು ದಿನಾಂಕ ಪ್ರಕಟಿಸುವುದಾಗಿ ಹೇಳಿದೆ. ಆದರೆ, ಮೇ 31ರವರೆಗೆ ಲಾಕ್ ಡೌನ್ ಮುಂದುವರೆದಿರುವುದರಿಂದ ಗೊಂದಲ ಮುಂದುವರೆದಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!