Tuesday, April 13, 2021

ರಾಜ್ಯದ ಕಂಟೈನ್ಮೆಂಟ್ ಝೋನ್’ಗಳಲ್ಲಿ ಜು.31ರವರೆಗೆ ಲಾಕ್’ಡೌನ್

ಬೆಂಗಳೂರು: ರಾಜ್ಯದ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆಗೊಂಡಿದೆ.
ಕೊರೋನಾ ಅನ್‍ಲಾಕ್ ಹಂತ 2ಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಟಿ.ಎಂ.ವಿಜಯಭಾಸ್ಕರ್ ಆದೇಶ ಹೊರಡಿಸಿದ್ದಾರೆ.
ಹೊಸ ಮಾರ್ಗಸೂಚಿಗಳು ತಕ್ಷಣದಿಂದ ಜಾರಿಗೆ ಬಂದಿದ್ದು, ಜು.31ರವರೆಗೆ ಚಾಲ್ತಿಯಲ್ಲಿರಲಿವೆ. ಬಿಬಿಎಂಪಿ ಆಯುಕ್ತರು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರು ಹಾಗೂ ಇತರ ಇಲಾಖಾ ಮುಖ್ಯಸ್ಥರು ಲಾಕ್ ಡೌನ್ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.
ಜು.31ರವರೆಗೆ ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ ಸಂಸ್ಥೆಗಳು, ತರಬೇತಿ ಕೇಂದ್ರಗಳು ಮುಚ್ಚಲ್ಪಟ್ಟಿರುತ್ತವೆ. ಆನ್‍ಲೈನ್ ಹಾಗೂ ದೂರಶಿಕ್ಷಣ ಮುಂದುವರೆಯಲಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ತರಬೇತಿ ಸಂಸ್ಥೆಗಳು ಡಿಓಪಿಟಿ ಹಾಗೂ ಡಿಪಿಎಆರ್ ಸೂಚನೆಗಳನ್ವಯ ಜು.15ರಿಂದ ಕಾರ್ಯಾರಂಭ ಮಾಡಬಹುದಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!