Monday, April 12, 2021

ಉಗ್ರರ ದಾಳಿ; ಕರಾಚಿಯಿಂದ ಬೆದರಿಕೆ ಫೋನ್ ಕರೆ, ಮುಂಬೈನಲ್ಲಿ ಹೈ ಅಲರ್ಟ್

ಮುಂಬೈ: ಮುಂಬೈ ನಗರದಲ್ಲಿ ಮತ್ತೆ ಉಗ್ರರ ದಾಳಿ ನಡೆಯಲಿದೆ ಎಂದು ಮುಂಬೈ ಪೊಲೀಸರಿಗೆ ಕರಾಚಿಯಿಂದ ಬೆದರಿಕೆ ಕರೆ ಬಂದಿದೆ.
ಸೋಮವಾರ ರಾತ್ರಿ ಬಂಡ ಈ ಕರೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ನಗರದ ಸೂಕ್ಷ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಮುಂಬೈ ಪೊಲೀಸರಿಗೆ ಪಾಕಿಸ್ತಾನದ ಕರಾಚಿಯಿಂದ ಬೆದರಿಕೆ ಕರೆ ಬಂದಿದೆ. ಮುಂಬೈ ನಗರದ ಹೋಟೆಲ್‌ಗಳ ಮೇಲೆ ಉಗ್ರರು ದಾಳಿ ನಡೆಸಲಿದ್ದಾರೆ ಎಂದು ಫೋನ್ ಮಾಡಿದ್ದ ವ್ಯಕ್ತಿ ಮಾಹಿತಿ ನೀಡಿದ್ದಾನೆ.
ಕರೆ ಬಂದ ತಕ್ಷಣ ಪೊಲೀಸರು ತಾಜ್ ಹೋಟೆಲ್ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಇದು ಹುಸಿ ಕರೆಯಾಗಿರುವ ಸಾಧ್ಯತೆಯೂ ಇದೆ. ಆದರೆ, ಪರಿಸ್ಥಿತಿ ಎದುರಿಸಲು ಪೊಲೀಸರು ಸಜ್ಜಾಗಿದ್ದು, ಭದ್ರತೆ ಒದಗಿಸಿದ್ದಾರೆ.
ಕಳೆದ ವಾರ ದೆಹಲಿಗೆ ಐವರು ಉಗ್ರರು ಆಗಮಿಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ತಿಂಗಳಿನಿಂದ ಉಗ್ರರು ಸಕ್ರಿಯರಾಗಿದ್ದಾರೆ. ಮಂಗಳವಾರ ಮುಂಜಾನೆ ಸಹ ಬಿಜ್ವಾರದಲ್ಲಿ ಸಿಆರ್‌ಪಿಎಫ್ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!