newsics.com
ಬೆಂಗಳೂರು: ನಗರದ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಪತ್ತೆಯಾಗಿದ್ದಾರೆ. ಆಟೋ ಚಾಲಕರೊಬ್ಬರ ಸಮಯ ಪ್ರಜ್ಞೆಯಿಂದ ಮಕ್ಕಳನ್ನು ಮಂಗಳೂರಿನಲ್ಲಿ ಪತ್ತೆ ಹಚ್ಚಲಾಗಿದೆ.
ಮಕ್ಕಳ ಪತ್ತೆ ಹಚ್ಚುವ ಸಂಬಂಧ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದರು. ಭೂಮಿ, ಚಿಂತನ್ , ರಾಯನ್ ಮತ್ತು ಇನ್ನೊಬ್ಬರನ್ನು ಪತ್ತೆ ಹಚ್ಚಲಾಗಿದೆ.
ಮಕ್ಕಳ ನಾಪತ್ತೆ ಪ್ರಕರಣ ರಾಜ್ಯದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಶೀಘ್ರವೇ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ