Saturday, April 17, 2021

ರಾಜ್ಯಕ್ಕೆ ಮುಂಗಾರು ಪ್ರವೇಶ, 5 ಜಿಲ್ಲೆಗಳಲ್ಲಿ ಉತ್ತಮ ಮಳೆ

ಬೆಂಗಳೂರು: ರಾಜ್ಯಕ್ಕೆ ಗುರುವಾರ ಮುಂಗಾರು ಪ್ರವೇಶವಾಗಿದ್ದು, ರಾಜ್ಯದ ಚಾಮರಾಜನಗರ, ಹಾಸನ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಈ ವರ್ಷ ಮುಂಗಾರು ಅವಧಿಯಲ್ಲಿ ದಕ್ಷಿಣ ಭಾರತ ರಾಜ್ಯಗಳಲ್ಲಿ ಶೇ.102ರಷ್ಟು ವಾಡಿಕೆ ಮಳೆಯಾಗಲಿದೆ. ಜುಲೈನಲ್ಲಿ ಶೇ.104ರಷ್ಟು, ಆಗಸ್ಟ್‌ನಲ್ಲಿ ಶೇ.97ರಷ್ಟು ವಾಡಿಕೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಶೇ. 80ರಷ್ಟು ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ನಿಸರ್ಗ ಚಂಡಮಾರುತ ತೀವ್ರತೆ ಕಡಿಮೆಯಾಗಿದ್ದು, ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಿದೆ. ಇದರ ಹೊರತಾಗಿಯೂ ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಇನ್ನು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಿದೆ.
ಕಳೆದ 24 ಗಂಟೆಯಲ್ಲಿ ಕಾರವಾರದಲ್ಲಿ ಅತಿ ಹೆಚ್ಚು 15 ಸೆಂ.ಮೀ, ಗೋಕರ್ಣದಲ್ಲಿ 10, ಹೊನ್ನಾವರದಲ್ಲಿ 8, ಮಂಕಿಯಲ್ಲಿ 7, ಕದ್ರಾ ಹಾಗೂ ಕೊಡಗಿನ ಭಾಗಮಂಡಲದಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!