newsics.com
ಬೆಂಗಳೂರು: ಕೊಡಗು ಜಿಲ್ಲೆ ಸೇರಿ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ಜುಲೈ 5ರವರೆಗೂ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಂಗಳೂರು, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
ಭಾರೀ ಮಳೆಯಿಂದಾಗಿ ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಬ್ರಹ್ಮಗಿರಿ ಬೆಟ್ಟ ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಈಗ ಸಂಗಮ ಭರ್ತಿಯಾಗಿ ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ. ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ. ಹಾರಂಗಿ ಜಲಾಶಯ ಭರ್ತಿಯಾಗಿದ್ದು ಶನಿವಾರ 1,200 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಜುಲೈ 5ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ: ಮೈಸೂರು ಪೊಲೀಸರಿಗೆ ನಟಿ ಪವಿತ್ರಾ ಲೋಕೇಶ್ ದೂರು
ಆಲಿವ್ ರಿಡ್ಲಿ ಆಮೆ ಸಂತತಿ ರಕ್ಷಣೆಗೆ ಹೊಸ ಯೋಜನೆ ರೂಪಿಸಿದ ಅರಣ್ಯ ಇಲಾಖೆ