ನವದೆಹಲಿ: ಕೊರೋನಾ ವಿರುದ್ಧದ ಹೋರಾಟದಲ್ಲಿ ಭಾರತವು 150ಕ್ಕೂ ಹೆಚ್ಚು ದೇಶಗಳಿಗೆ ನೆರವು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಸಂಸ್ಥೆಯ ಆರ್ಥಿಕ ಹಾಗೂ ಸಾಮಾಜಿಕ ಮಂಡಳಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 150ಕ್ಕೂ ಅಧಿಕ ದೇಶಗಳಿಗೆ ವೈದ್ಯಕೀಯ ಮತ್ತು ಇತರೆ ಸಹಕಾರ ನೀಡಲಾಗಿದೆ. ಹಾಗೆಯೇ ಭಾರತದಲ್ಲಿಯೂ ಸಾಕಷ್ಟು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಮೊದಲ ಬಾರಿಗೆ ಸಮುದಾಯ ಮಟ್ಟದಲ್ಲಿ ಕೊರೋನಾ ಹರಡುವಿಕೆ ದೃಢೀಕರಣ
ಭಾರತವು ವಿಶ್ವದ ಒಂದನೇ ಆರರಷ್ಟು ಜನಸಂಖ್ಯೆಯನ್ನು ಹೊಂದಿದೆ. ಹೀಗಾಗಿ ನಮ್ಮ ಜವಾಬ್ದಾರಿಯನ್ನು ನಾವು ಅರಿತಿದ್ದೇವೆ. ಕೊರೋನಾ ಕಾರಣದಿಂದ ವಿಶ್ವದೆಲ್ಲೆಡೆ ಆರ್ಥಿಕ ಅಸ್ಥಿರತೆ ನಿರ್ಮಾಣವಾಗಿದೆ. ಪರಿಸ್ಥಿತಿ ಬದಲಾಗುತ್ತಿದೆ. ಹೀಗಾಗಿ ಆರ್ಥಿಕ ಪುನರ್ ನಿರ್ಮಾಣದತ್ತ ಹೆಜ್ಜೆ ಹಾಕಬೇಕಿದೆ. ಭಾರತ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.