Thursday, December 2, 2021

ಕೊರೋನಾ ಸಾವಿನ ಸರಣಿ ಮುಂದುವರಿಕೆ; ವಿಶ್ವಾದ್ಯಂತ 67 ಸಾವಿರಕ್ಕೂ ಹೆಚ್ಚು ಜನ ಬಲಿ

Follow Us

ವಾಷಿಂಗ್ಟನ್/ಇಂಗ್ಲೆಂಡ್/ಮಿಲಾನ್: ಕೊರೋನಾ ಕ್ರೌರ್ಯಕ್ಕೆ 205ಕ್ಕೂ ಹೆಚ್ಚು ದೇಶಗಳಲ್ಲಿ ಸಾವು-ನೋವಿನ ಸರಣಿ ಮುಂದುವರಿದಿದೆ. ವಿಶ್ವದಾದ್ಯಂತ ಈವರೆಗೆ 67,000ಕ್ಕೂ ಮಂದಿ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 12 ಲಕ್ಷ ದಾಟಿದೆ.
ಕೊರೋನಾದಿಂದ ನೂರಾರು ಜನರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೇ ಕಳವಳ ವ್ಯಕ್ತಪಡಿಸಿದೆ.
ಜಗತ್ತಿನಾದ್ಯಂತ ಈವರೆಗೆ 64,753 ಮಂದಿ ಮೃತರಾಗಿದ್ದು, 11,97,400 ಮಂದಿ ಸೋಂಕುಪೀಡಿತರಾಗಿದ್ದಾರೆ.
ಅತ್ಯಂತ ಬಲಿಷ್ಠ ದೇಶ ಅಮೆರಿಕವೇ ಕೊರೋನಾ ದಾಳಿಯಿಂದ ಕಂಗಾಲಾಗಿದೆ. ಅಮೆರಿಕದಲ್ಲಿ ಪ್ರತಿದಿನ ಸರಾಸರಿ 1000 ಮಂದಿ ಅಸುನೀಗಿದ್ದಾರೆ. ಮೃತರ ಸಂಖ್ಯೆ 10,000ಕ್ಕೇರಿದೆ. ವಿಶ್ವದಲ್ಲೇ ಅತಿ ಹೆಚ್ಚು ಸೋಂಕು ಪ್ರಕರಣಗಳು ಅಮೆರಿಕದಲ್ಲಿ ದಾಖಲಾಗಿವೆ. ಅಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಈಗಾಗಲೇ 3.10 ಲಕ್ಷ ಸಮೀಪದಲ್ಲಿದೆ.
ನ್ಯೂಯಾರ್ಕ್ ಈಗ ಸಾವಿನ ಮನೆಯಾಗಿದ್ದು, ಅಲ್ಲಿ ಸಾವು ಮತ್ತು ಸೋಂಕು ಪ್ರಕರಣಗಳು ಪುನರಾವರ್ತನೆಯಾಗುತ್ತಲೇ ಇವೆ. ಅಲ್ಲಿ ಸುಮಾರು 3000ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಕಿಲ್ಲರ್ ಕೊರೋನಾದಿಂದ ಘನಘೋರ ಪರಿಸ್ಥಿತಿ ಎದುರಿಸುತ್ತಿರುವ ಇಟಲಿ ಮತ್ತು ಸ್ಪೇನ್ ಸೇರಿದಂತೆ ಯುರೋಪ್ ಖಂಡದಲ್ಲಿ ಮೃತಪಟ್ಟವರ ಸಂಖ್ಯೆ 35,000 ದಾಟಿದೆ.
ಇಟಲಿಯಲ್ಲಿ ಈಗಾಗಲೇ 10,000ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಕೊರೋನಾ ಹೆಮ್ಮಾರಿಯಿಂದ 1,24,632 ಜನರು ಸೋಂಕುಪೀಡಿತರಾಗಿದ್ದರೆ. ಜರ್ಮನಿ ಮತ್ತು ಫ್ರಾನ್ಸ್ ನಲ್ಲಿ ಅನುಕ್ರಮವಾಗಿ 92,150 ಮತ್ತು 83,031 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಚೀನಾ, ದಕ್ಷಿಣ ಕೊರಿಯಾ ಸೇರಿದಂತೆ ವಿಶ್ವದ ವಿವಿಧ ದೇಶಗಳಲ್ಲಿ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಮತ್ತಷ್ಟು ಆತಂಕಕಾರಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!