Thursday, August 18, 2022

ಗುರೂಜಿ ಕೊಲೆ ಮಾಡಿ ನನ್ನ ಗಂಡ ತಪ್ಪು ಮಾಡಿದ್ದಾರೆ: ವನಜಾಕ್ಷಿ ಹೇಳಿಕೆ

Follow Us

newsics.com

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಬಹಳ‌ ಒಳ್ಳೆಯವರು. ಅವರನ್ನು ಕೊಲೆ ಮಾಡುವ ಮೂಲಕ ನನ್ನ ಗಂಡ ತಪ್ಪು ಮಾಡಿದ್ದಾರೆ. ಆದರೆ, ಕೊಲೆಗೆ ಕಾರಣವೇನು ಎಂಬುದು ಗೊತ್ತಿಲ್ಲ ಎಂದು ಆರೋಪಿ ಮಹಾಂತೇಶ ಶಿರೂರ ಪತ್ನಿ ವನಜಾಕ್ಷಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಬುಧವಾರ ಚಂದ್ರಶೇಖರ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನಮಗೂ ಗುರೂಜಿಗೂ ಯಾವುದೇ ಗಲಾಟೆ ಇರಲಿಲ್ಲ. ಅಪಾರ್ಟ್‌ಮೆಂಟ್ ನನ್ನ ಹೆಸರಲ್ಲಿದೆ ಎನ್ನುವುದು ಸುಳ್ಳು. ಬ್ಯಾಂಕ್‌ನಲ್ಲಿ ಸಾಲ ಮಾಡಿ ಪ್ಲ್ಯಾಟ್ ಖರೀದಿ ಮಾಡಿದ್ದೇವೆ ಎಂದರು.

2005ರಲ್ಲಿ ಸರಳ ಜೀವನ ಸಂಸ್ಥೆ ಸೇರಿಕೊಂಡಿದ್ದೆ. 2019ರಲ್ಲಿ ಮುಂಬೈಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದೆ. ನನ್ನ ಪತಿ ಕೂಡ 2016ರಲ್ಲಿ ಕೆಲಸ ಬಿಟ್ಟಿದ್ದರು. ಯಾಕೆ ಬಿಟ್ಟಿದ್ದರು ಎಂಬುದು ಗೊತ್ತಿಲ್ಲ. ಪತಿ ಹೆಸರಿನಲ್ಲಿ ಗುರೂಜಿ ಆಸ್ತಿ ಮಾಡಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ನಾಲ್ಕೈದು ದಿನಗಳಿಂದ ಪತಿ ಮನೆಗೆ ಬಂದಿರಲಿಲ್ಲ. ಕರೆ ಮಾಡಿ ವಿಚಾರಿಸಿದಾಗ, ಕೆಲಸದಲ್ಲಿದ್ದೇನೆ ಎನ್ನುತ್ತಿದ್ದರು. ಆದರೆ, ಮಂಗಳವಾರ ಬೆಳಗ್ಗೆ ಟಿ.ವಿ.ಯಲ್ಲಿ ನೋಡಿದಾಗಲೇ ಅವರು ಸ್ವಾಮೀಜಿ ಅವರನ್ನು ಕೊಲೆ ಮಾಡಿರುವ ವಿಷಯ ಗೊತ್ತಾಯಿತು ಎಂದು ಹೇಳಿದ್ದಾರೆ.

ಲಿಂಗಾಯಿತ ಸಂಪ್ರದಾಯದಂತೆ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!