Saturday, April 17, 2021

ಮೈಸೂರು 5 ಸ್ಟಾರ್ ತ್ಯಾಜ್ಯಮುಕ್ತ ನಗರ- ಕೇಂದ್ರ ಘೋಷಣೆ

ನವದೆಹಲಿ/ಮೈಸೂರು: ಮೈಸೂರು ನಗರವನ್ನು 5 ಸ್ಟಾರ್ ತ್ಯಾಜ್ಯ ಮುಕ್ತ ನಗರವನ್ನಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಘೋಷಿಸಿದೆ.
ಮೇ 19 ರಂದು ಕೇಂದ್ರ ಸರ್ಕಾರ ಭಾರತದಲ್ಲಿರುವ 5 ಸ್ಟಾರ್ ತ್ಯಾಜ್ಯ ಮುಕ್ತ ನಗರಗಳ ಪಟ್ಟಿಯನ್ನು ಘೋಷಿಸಿದ್ದು ದಕ್ಷಿಣ ಭಾರತದಲ್ಲಿ ಮೈಸೂರು ನಗರ ಮಾತ್ರ ಈ ಪಟ್ಟಿಯಲ್ಲಿ ಸ್ಥಾನ ಗಳಿಸಿದೆ.
ಅಂಬಿಕಾಪುರ್, ರಾಜ್ ಕೋಟ್, ಸೂರತ್, ಇಂದೋರ್, ನವಿ ಮುಂಬೈ 5 ಸ್ಟಾರ್ ತ್ಯಾಜ್ಯ ಮುಕ್ತ ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
ತ್ಯಾಜ್ಯ ಮುಕ್ತವನ್ನಾಗಿ ಮಾಡಲು ಮೈಸೂರು ನಗರ ಪಾಲಿಕೆಯ ಶ್ರಮ ಫಲ ನೀಡಿದೆ. 25 ಪ್ರಮುಖ ನಿಯತಾಂಕಗಳ ಆಧಾರದಲ್ಲಿ 5 ಸ್ಟಾರ್ ತ್ಯಾಜ್ಯ ಮುಕ್ತ ನಗರಗಳನ್ನು ಘೋಷಿಸಲಾಗಿದೆ. ಬಗ್ಗೆ ಎಂಸಿಸಿ ಆಯುಕ್ತ ಗುರುದತ್ತ ಹೆಗ್ಡೆ ಸಂತಸ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!