Saturday, April 17, 2021

ಕೊರೋನಾ ಮೃತರ ಅಂತ್ಯಸಂಸ್ಕಾರಕ್ಕೆ ಹೊಸ ನೀತಿ

ನವದೆಹಲಿ: ಕೊರೋನಾದಿಂದ‌ ಮೃತಪಟ್ಟವರ ಅಂತ್ಯಸಂಸ್ಕಾರದ ವೇಳೆ ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿತರ ‌ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಲಾಗುವುದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.
ಪರಿಷ್ಕೃತ‌ ಮಾರ್ಗಸೂಚಿಯಿಂದ ಅಂತ್ಯಸಂಸ್ಕಾರದಲ್ಲಿ ಅನಗತ್ಯ ವಿಳಂಬವಾಗುವುದು ತಪ್ಪಲಿದ್ದು, ಸ್ಪಷ್ಟವಾದ‌ ಮಾರ್ಗಸೂಚಿ ರಚಿಸಲಾಗುವುದು ಎಂದು ಶಾ ಹೇಳಿದ್ದಾರೆ.
ಇನ್ಮುಂದೆ ಕೋವಿಡ್ ಸೇವೆಗೆ ಸ್ಕೌಟ್, ಗೈಡ್ಸ್ ಹಾಗೂ ಎನ್ ಸಿ ಸಿ ಸೇವಾ ವ್ಯವಸ್ಥೆಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೋನಾ ಕುರಿತು ನಡೆಸಿದ ಸಭೆ ಬಳಿಕ ಶಾ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!