Monday, August 8, 2022

ಐಸಿಸ್ ಉಗ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಎನ್ ಐ ಎ ಕೋರ್ಟ್

Follow Us

ಕೊಚ್ಚಿ:  ನಿಷೇಧಿತ ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಐಸಿಸ್ ಸದಸ್ಯನೊಬ್ಬನಿಗೆ ಎನ್ ಐ ಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇಂದು ತೀರ್ಪು ನೀಡಿದ ನ್ಯಾಯಾಲಯ ಅಪರಾಧಿ  ಮೊಹಿದ್ದೀನ್ ಗೆ 2, 10,000 ರೂಪಾಯಿ ದಂಡ ಕೂಡ ವಿಧಿಸಿದೆ.

ಭಾರತದ ಮಿತ್ರ ರಾಷ್ಟ್ರವಾಗಿರುವ ಇರಾಕ್ ವಿರುದ್ಧ ಯುದ್ದ ಸಾರಿದ್ದು ಸೇರಿದಂತೆ  ಹಲವು ಗಂಭೀರ ಆರೋಪಗಳನ್ನು  ಐಸಿಸ್ ಸದಸ್ಯ ಮೊಹಿದ್ದೀನ್ ವಿರುದ್ಧ ಹೊರಿಸಲಾಗಿತ್ತು.

ಇದೇ ಮೊದಲ ಬಾರಿಗೆ ದೇಶದಲ್ಲಿ ಐಸಿಸ್ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದ ವ್ಯಕ್ತಿಗೆ ಶಿಕ್ಷೆ ನೀಡಲಾಗಿದೆ. ಮೂಲತ: ಕೇರಳದವನಾಗಿರುವ ಮೊಹಿದ್ದೀನ್ ಐಸಿಸ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ.

ಕೇರಳದ ಕಾಸರಗೋಡು ಜಿಲ್ಲೆಯಿಂದ ನಿಗೂಢವಾಗಿ ನಾಪತ್ತೆಯಾಗಿರುವ ಹಲವು ಮಂದಿ ಐಸಿಸ್  ಸೇರಿರಬಹುದು ಎಂಬ ಸಂಶಯವನ್ನು ಎನ್ ಐ ಎ ವ್ಯಕ್ತಪಡಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!