ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಮಾರ್ಚ್ 3 ರಂದು ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ಡೆತ್ ವಾರಂಟ್ ಜಾರಿಗೊಳಿಸಿದೆ.
ಈ ಹಿಂದೆ ಕೂಡ ನ್ಯಾಯಾಲಯ ಎರಡು ಬಾರಿ ಡೆತ್ ವಾರಂಟ್ ಜಾರಿಗೊಳಿಸಿತ್ತಾದರೂ, ಅಪರಾಧಿಗಳ ಕ್ಷಮಾದಾನ ಅರ್ಜಿಗಳು ಪರಿಶೀಲನಾ ಹಂತದಲ್ಲಿದ್ದ ಹಿನ್ನೆಲೆಯಲ್ಲಿ ಅದಕ್ಕೆ ತಡೆಯಾಜ್ಞೆ ನೀಡಲಾಗಿತ್ತು. ಆದರೆ, ಈಗ ಎಲ್ಲಾ ಅಪರಾಧಿಗಳ ಕಾನೂನು ಅವಕಾಶಗಳು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಡೆತ್ ವಾರಂಟ್ ಪಾಲನೆಯಾಗುವ ನಿರೀಕ್ಷೆಯಿದೆ.