ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಇನ್ನಿಲ್ಲ

ಬೆಂಗಳೂರು: ನಿತ್ಯೋತ್ಸವ ಕವಿ, ಕನ್ನಡ ಸಾರಸ್ವತ ಲೋಕದ ದಿಗ್ಗಜ, ಕೆಎಸ್ ನಿಸಾರ್ ಅಹಮದ್ (84) ನಿಧನರಾದರು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಮೂಲಕ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ.
ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರವರಿ 5, 1936ರಲ್ಲಿ ಜನಿಸಿದರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರವರೆಗೆ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗೂ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.
ಸಾಹಿತ್ಯ ಕೃಷಿ:
ನಿಸಾರ್ ಅಹಮದ್ ಅವರ ಸಾಹಿತ್ಯಾಸಕ್ತಿ 10ನೇ ವಯಸ್ಸಿನಲ್ಲೇ ಆರಂಭ. ‘ಜಲಪಾತ’ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಇಲ್ಲಿಯವರೆಗೆ (2018) 21 ಕವನ ಸಂಕಲನ, 14 ವೈಚಾರಿಕೆ ಕೃತಿಗಳು, 5 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದ ಕೃತಿಗಳು, 13 ಸಂಪಾದನಾ ಗ್ರಂಥಗಳನ್ನು ಹೊರತಂದಿದ್ದಾರೆ.
ಅವುಗಳಲ್ಲಿ ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ.
1978ರಲ್ಲಿ ಇವರ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ನಿತ್ಯೋತ್ಸವ ಹೊರಬಂದು, ಕನ್ನಡ ಲಘುಸಂಗೀತ (ಸುಗಮ ಸಂಗೀತ) ಕ್ಷೇತ್ರದಲ್ಲಿ ಭರ್ಜರಿ ಯಶಸ್ಸು ಪಡೆಯಿತು. ಇದುವರೆಗೂ (2018) 13 ಧ್ವನಿಸುರುಳಿಗಳ ಮೂಲಕ ಅವರು ರಚಿಸಿದ ಕವನಗಳು, ಗೀತೆಗಳು ಸಂಗೀತದೊಂದಿಗೆ ಪ್ರಚುರಗೊಂಡಿವೆ. ಕುರಿಗಳು ಸಾರ್ ಕುರಿಗಳು, ರಾಜಕೀಯ ವಿಡಂಬನೆ ಕವನ
ಭಾರತವು ನಮ್ಮ ದೇಶ (ಸರ್ ಮೊಹಮದ್ ಇಕ್ಬಾಲ್ ಅವರ ಸಾರೆ ಜಹಾಂ ಸೆ ಅಚ್ಚಾ ಕವನದ ಕನ್ನಡ ಭಾಷಾಂತರ)
ಬೆಣ್ಣೆ ಕದ್ದ ನಮ್ಮ ಕೃಷ್ಣ ಕವನ ಕವಿಯ ಬಹುಮುಖ ಪ್ರತಿಭೆಗೆ ಸಾಕ್ಷಿಯಾಗಿವೆ.

LEAVE A REPLY

Please enter your comment!
Please enter your name here

Read More

ರಾಜ್ಯದಲ್ಲಿ UG, PG ಕಾಲೇಜು ಆರಂಭ; ನಾಳೆ ಅಂತಿಮ ನಿರ್ಧಾರ

newsics.comಬೆಂಗಳೂರು: ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ ಕಾಲೇಜು ಆರಂಭದ ಬಗ್ಗೆ ನಾಳೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕಾಲೇಜು ಆರಂಭ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.ಯುಜಿ ಹಾಗೂ...

ಕನ್ನಡ ಪ್ರಬಂಧ, ಕವನ ಸ್ಪರ್ಧೆ

newsics.com ಮಂಗಳೂರು: ಕರ್ನಾಟಕ ಪರ್ತಕರ್ತರ ಸಂಘದ ಪುತ್ತೂರು ತಾಲೂಕು ಘಟಕ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಬಂಧ, ಕವನ ಸ್ಪರ್ಧೆ ಆಯೋಜಿಸಿದೆ. ಪುತ್ತೂರು ತಾಲೂಕಿನ ಕಾಲೇಜು ವಿದ್ಯಾರ್ಥಿಗಳಿಗಾಗಿ 'ಆಂಗ್ಲ ಭಾಷೆಯ ಕಪಿಮುಷ್ಠಿಯಲ್ಲಿ ಕನ್ನಡದ ಉಸಿರು' ಹಾಗೂ ಸಾರ್ವಜನಿಕರಿಗೆ'...

1ರಿಂದ 12ನೇ ತರಗತಿವರೆಗೆ ಶೇ.30 ಪಠ್ಯ ಕಡಿತ

newsics.comಬೆಂಗಳೂರು: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹ ಕೇಂದ್ರ ಸರ್ಕಾರದಂತೆ 1 ರಿಂದ 12 ನೇ ತರಗತಿವರೆಗೆ ಶೇ.30ರಷ್ಟು ಪಠ್ಯವನ್ನು ಕಡಿತ ಮಾಡಿದೆ.ಈ ನಿಟ್ಟಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯು...

Recent

error: Content is protected !!