Tuesday, April 13, 2021

ನಿಸರ್ಗ ಅಬ್ಬರಕ್ಕೆ ಮಹಾರಾಷ್ಟ್ರ ತತ್ತರ, ಮೂವರ ಬಲಿ

ಮುಂಬೈ: ನಿಸರ್ಗ ಚಂಡಮಾರುತ ಮಹಾರಾಷ್ಟ್ರದಲ್ಲಿ ಅಟ್ಟಹಾಸ ಮೆರೆದಿದ್ದು, ಮುಂಬೈನಲ್ಲಿ ತಲ್ಲಣ ಸೃಷ್ಟಿಸಿದೆ. ಭಾರೀ ಗಾಳಿ, ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ನಿಸರ್ಗ ಚಂಡ ಮಾರುತ ಅರಬ್ಬೀ ಸಮುದ್ರದಿಂದ ಮಹಾರಾಷ್ಟ್ರದತ್ತ ಗಂಟೆಗೆ 120 ಕಿ.ಮೀ. ವೇಗದಲ್ಲಿ ಸಂಚರಿಸುತ್ತಿದೆ.
ವಿದ್ಯುತ್ ಕಂಬ ಬಿದ್ದು ಅಲಿಬಾಗ್​ನ ಉಮ್ಟೆ ಗ್ರಾಮದ 58 ವರ್ಷದ ವ್ಯಕ್ತಿ ಸೇರಿ ನಿಸರ್ಗ ಅಬ್ಬರಕ್ಕೆ ಮಹಾರಾಷ್ಟ್ರದಲ್ಲಿ ಮೂವರು ಬಲಿಯಾಗಿದ್ದಾರೆ. ರಾಯಗಡ ಜಿಲ್ಲೆಯಲ್ಲಿ 85ಕ್ಕೂ ಅಧಿಕ ಬೃಹತ್​ ಮರಗಳು ಮನೆಗಳ ಮೇಲೆ ಉರುಳಿವೆ. 20 ವಿದ್ಯುತ್​ ಕಂಬಗಳು ನೆಲಕ್ಕೆ ಉರುಳಿವೆ. ಹೀಗಾಗಿ ಇಡೀ ಜಿಲ್ಲೆಯಲ್ಲಿ ವಿದ್ಯುತ್​ ಪೂರೈಕೆ ಸ್ಥಗಿತಗೊಂಡಿದೆ. ಅಲಿಬಾಗ್​ನಲ್ಲಿ ಭೂಕುಸಿತ ಸಂಭವಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಜನರ ರಕ್ಷಣೆಗೆ ಧಾವಿಸಿದೆ. ಮರ ಹಾಗೂ ವಿದ್ಯುತ್​ ಕಂಬಗಳನ್ನು ತೆರವುಗೊಳಿಸುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!