Saturday, April 17, 2021

ಆಗಸ್ಟ್​ 15ಕ್ಕೆ ಕೊರೋನಾ ಲಸಿಕೆ ಸಿಗಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಭಾರತ್​ ಬಯೋಟೆಕ್​ ಇಂಟರ್​ನ್ಯಾಷನಲ್​ ಲಿಮಿಟೆಡ್​ನ ಕೊವ್ಯಾಕ್ಸಿನ್​ ರೋಗನಿರೋಧಕ ಲಸಿಕೆ ಆಗಸ್ಟ್​ 15ಕ್ಕೆ ಮಾರುಕಟ್ಟೆಗೆ ಬರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೊರೋನಾ ಲಸಿಕೆಗೆ 2021ರವರೆಗೆ ಕಾಯಬೇಕು ಎಂದು ಕೇಂದ್ರ ವಿಜ್ಞಾನ ಸಚಿವಾಲಯ ಭಾನುವಾರ ತಿಳಿಸಿದೆ. ದೇಶದಲ್ಲಿ 140ಕ್ಕೂ ಹೆಚ್ಚು ಕೊರೋನಾ ರೋಗನಿರೋಧಕ ಚುಚ್ಚುಮದ್ದುಗಳ ಪರೀಕ್ಷೆ ತೀವ್ರಗತಿಯಲ್ಲಿ ಸಾಗಿದೆ. ಆದರೆ 2021ಕ್ಕಿಂತ ಮೊದಲು ಮಾರುಕಟ್ಟೆಗೆ ಬಿಡುಗಡೆಯಾಗುವ ಸಾಧ್ಯತೆ ತೀರಾ ಕಡಿಮೆ. ಹೀಗಾಗಿ, ಕೊವ್ಯಾಕ್ಸಿನ್​, ಝೈಕೋವ್​-ಡಿ ಸೇರಿ ಎಲ್ಲ ಬಗೆಯ ಕೊರೋನಾ​ ರೋಗನಿರೋಧಕ ಚುಚ್ಚುಮದ್ದುಗಳಿಗಾಗಿ 2021ರವರೆಗೆ ಕಾಯುವುದು ಅನಿವಾರ್ಯವಾಗಿದೆ ಎಂದು ವಿಜ್ಞಾನ ಸಚಿವಾಲಯ ಹೇಳಿದೆ.
ಪ್ರಾಣಿಗಳ ಮೇಲಿನ ಪ್ರಯೋಗದಲ್ಲಿ ಕೊವ್ಯಾಕ್ಸಿನ್​ ರೋಗನಿರೋಧಕ ಚುಚ್ಚುಮದ್ದು ಕೊರೋನಾ ಚಿಕಿತ್ಸೆಗೆ ಪರಿಣಾಮಕಾರಿಯಾಗಲಿದೆ ಎಂದು ಖಚಿತವಾಗಿದೆ. ಹೀಗಾಗಿ ಮನುಷ್ಯರ ಮೇಲೆ ಪ್ರಯೋಗ ಮಾಡಲು ಹೈದರಾಬಾದ್​ ಮೂಲದ ಭಾರತ್​ ಬಯೋಟೆಕ್​ ಇಂಟರ್​ನ್ಯಾಷನಲ್​ ಲಿಮಿಟೆಡ್​ಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಮಧ್ಯೆ, ಆಗಸ್ಟ್​ 15ರ ಸ್ವಾತಂತ್ರ್ಯೋತ್ಸವದಂದು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್​) ತಿಳಿಸಿತ್ತು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!