ನವದೆಹಲಿ: ಮಾರಕ ಕೊರೋನಾ ನಿಯಂತ್ರಿಸಲು ಯಾವುದೇ ಕಾರಣಕ್ಕೆ ಸ್ಥಳೀಯ ಮಟ್ಟದಲ್ಲಿ ಲಾಕ್ ಡೌನ್ ಜಾರಿ ಮಾಡಬೇಡಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚನೆ ನೀಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಲಾಕ್ ಡೌನ್ ಮಾರ್ಗ ಅನುಸರಿಸಲು ಕೇಂದ್ರ ಸಲಹೆ ನೀಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸೂಚನೆ ಮಹತ್ವಪಡೆದುಕೊಂಡಿದೆ.
ಲಾಕ್ ಡೌನ್ ಹೊರತುಪಡಿಸಿ ಇತರ ಮಾರ್ಗಗಳ ಮೂಲಕ ಕೊರೋನಾವನ್ನು ನಿಯಂತ್ರಣಕ್ಕೆ ತನ್ನಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಖಡಕ್ ಸಂದೇಶ ರವಾನಿಸಿದೆ. ದೇಶದ ಆರ್ಥಿಕತೆ ಭಾರೀ ಒತ್ತಡ ಎದುರಿಸುತ್ತಿದ್ದು, ಲಾಕ್ ಡೌನ್ ಜಾರಿಗೊಳಿಸುವುದರಿಂದ ನಿರೀಕ್ಷಿತ ಫಲ ನೀಡದು ಎಂಬ ಅಭಿಪ್ರಾಯಕ್ಕೆ ಕೇಂದ್ರ ಸರ್ಕಾರ ಬಂದಿದೆ.
ಕರ್ನಾಟಕದ 9 ಜಿಲ್ಲೆಗಳಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವುದರ ಕುರಿತು ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ