ಬೆಂಗಳೂರು: ಮಾರಕ ಕೊರೋನಾ ನಿಯಂತ್ರಿಸುವ ಸಂಬಂಧ ರಾಜಧಾನಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೇರಲಾಗಿರುವ ಲಾಕ್ ಡೌನ್ ವಿಸ್ತರಣೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಕಂದಾಯ ಸಚಿವ ಆರ್ . ಅಶೋಕ್ ಇದನ್ನು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಸಕ್ತ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ. ಈಗಾಗಲೇ ಘೋಷಣೆಯಾಗಿರುವ ಲಾಕ್ ಡೌನ್ ಒಂದು ವಾರ ಕಾಲ ಮುಂದುವರಿಯಲಿದೆ. ಅದರ ವಿಸ್ತರಣೆ ಅಗತ್ಯ ಇಲ್ಲ ಎಂಬ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಿದೆ ಎಂದು ಅವರು ಹೇಳಿದರು.
ಬೆಂಗಳೂರಿನಲ್ಲಿ ಕೊರೋನಾ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಸೂಕ್ತ ಎಂಬ ಆಗ್ರಹ ಬಲವಾಗಿ ಕೇಳಿ ಬಂದಿತ್ತು.