ಬೆಂಗಳೂರು: ಇನ್ನು ಸಂಡೆ ಲಾಕ್ ಡೌನ್ ಆಗಲೀ, ರಾತ್ರಿ ಕರ್ಫ್ಯೂ ಆಗಲೀ ಇರುವುದಿಲ್ಲ.
ರಾಜ್ಯ ಸರ್ಕಾರ ಅನ್ಲಾಕ್ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಸಂಡೆ ಲಾಕ್ಡೌನ್ ಇರುವುದಿಲ್ಲ. ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಅದೇ ರೀತಿ ಶನಿವಾರದ ಸರ್ಕಾರಿ ರಜೆಯನ್ನೂ ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ದೇಶಾದ್ಯಂತ ಜಾರಿಗೊಳಿಸಿದ್ದ ಲಾಕ್ ಡೌನ್ ತೆರವು ಮೂರನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ಅಂತೆಯೇ ರಾಜ್ಯ ಸರ್ಕಾರ ಕೂಡ ಅನ್ಲಾಕ್ 3.0 ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಪ್ರಕಾರ, ಮುಂದಿನ ಸಂಡೇ ಲಾಕ್ಡೌನ್ ಇರುವುದಿಲ್ಲ. ಆಗಸ್ಟ್ 2ರಂದು ಲಾಕ್ಡೌನ್ ತೆರವುಗೊಳಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಪ್ರತಿದಿನ ರಾತ್ರಿ ಕರ್ಫ್ಯೂ ಮತ್ತು ಭಾನುವಾರ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಇದನ್ನು ಈಗ ತೆರವುಗೊಳಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಹಾವು ಹಿಡಿದ ಸ್ವಾಮೀಜಿ…! ವಿಡಿಯೋ ವೈರಲ್…!