newsics.com
ಬೆಂಗಳೂರು: ಪುತ್ರ ಬಿ.ವೈ. ವಿಜಯೇಂದ್ರನಿಗೆ ಟಿಕೆಟ್ ನೀಡದಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಕಲ್ಪಿಸಿಕೊಡುವ ಭರವಸೆ ನನಗಿದೆ. ಸಾಮರ್ಥ್ಯ ಹಾಗೂ ಪಕ್ಷದಲ್ಲಿ ನಿಷ್ಠೆ ಇರುವವರಿಗೆ ಪಕ್ಷ ಯಾವತ್ತೂ ಕೈಬಿಡುವುದಿಲ್ಲ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ವಿಜಯೇಂದ್ರ ಅವರಿಗೆ ಚುನಾವಣೆಗೆ ಟಿಕೆಟ್ ನೀಡದಿರುವ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ವೈ, ವಿಜಯೇಂದ್ರ ಪಕ್ಷದ ಉಪಾಧ್ಯಕ್ಷರಾಗಿದ್ದಾರೆ. ಅವರಿಗೆ ಪಕ್ಷ ಇನ್ನು ಮುಂದೆ ಹೆಚ್ಚಿನ ಅವಕಾಶ ಮಾಡಿ ಕೊಡುತ್ತದೆ. ಇದೆಲ್ಲಾ ಪ್ರಧಾನಿ ಮೋದಿ ಹಾಗೂ ಜೆಪಿ ನಡ್ಡಾ ಅವರಿಗೆ ಬಿಟ್ಟ ವಿಚಾರ. ಟಿಕೆಟ್ ತಪ್ಪಿರುವುದಕ್ಕೂ ಬಿ.ಎಲ್.ಸಂತೋಷ್ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ 2024ರಲ್ಲೂ ಮತ್ತೆ ಅಧಿಕಾರಕ್ಕೆ ಬರಬೇಕು ಎನ್ನುವುದು ನಮ್ಮ ಗುರಿ. ಆ ದಿಕ್ಕಿನಲ್ಲಿ ಏನೆಲ್ಲಾ ಪ್ರಯತ್ನಗಳನ್ನು ಮಾಡಬೇಕೋ ಅದನ್ನು ಈಗಿಂದಲೇ ಮಾಡುತ್ತೇವೆ ಎಂದರು
ಕಾಂಗ್ರೆಸ್ ತೊರೆದ ಕಪಿಲ್ ಸಿಬಲ್: ರಾಜ್ಯಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ
ಸ್ಥಳೀಯ ನಿರ್ಮಿತ ಮೆಟ್ರೋ ಕೋಚ್ ಬಳಕೆಗೆ ಅನುಮತಿ, ಶೀಘ್ರದಲ್ಲೇ ಸಂಚಾರ ಆರಂಭ