newsics.com
ಬೆಂಗಳೂರು: ಆಗಸ್ಟ್ 15ರವರೆಗೆ ಬೆಂಗಳೂರಿನಲ್ಲಿ ವೀಕೆಙಡ್ ಕರ್ಫ್ಯೂ ಇಲ್ಲ ಎಂದು ಸಚಿವ ಅಶೋಕ್ ತಿಳಿಸಿದ್ದಾರೆ.
ಆಗಸ್ಟ್ 15ರ ನಂತರ ಪರಿಸ್ಥಿತಿ ನೋಡಿಕೊಂಡು ಅಗತ್ಯ ಬಿದ್ದರೆ ಮಾತ್ರ ಕೋವಿಡ್ ನಿಯಂತ್ರಣ ಕ್ರಮಗಳನ್ನು ಬಿಗಿಗೊಳಿಸಲಿದ್ದೇವೆ ಎಂದು ಅಶೋಕ್ ಸೋಮವಾರ ಹೇಳಿದರು.
ರಾಜ್ಯದಲ್ಲಿ ಸೋಂಕು ಪತ್ತೆ ದರ ಶೇ 2ಕ್ಕಿಂತ ಹೆಚ್ಚು ಇರುವ ಕಡೆ ಮಾತ್ರ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಗರದಲ್ಲಿ ಸೋಂಕು ಪತ್ತೆ ದರ ಶೇ 0.9 ದಿಂದ 0.64ಕ್ಕೆ ಇಳಿಕೆಯಾಗಿದೆ. ಇಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ 179 ಮಂದಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 479 ಮಂದಿ ಮಾತ್ರ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಬಿಬಿಎಂಪಿಯ ಹೊರಗಿನ ಪ್ರದೇಶಗಳಲ್ಲಿ 68 ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದರು.
ಸ್ವಾತಂತ್ರ್ಯ ದಿನವನ್ನು ಕೋವಿಡ್ ನಿಯಂತ್ರಣ ನಿಯಮ ಪಾಲಿಸಿ ಆಚರಣೆ ಮಾಡಲಾಗುವುದು. ಅಲ್ಲದೇ ಈ ತಿಂಗಳಲ್ಲಿ ಹಬ್ಬಗಳಿರುವುದರಿಂದ ದೇಗುಲಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋವಿಡ್‌ನಿಂದ ಬಳಲುವ ಮಕ್ಕಳ ಆರೈಕೆಗಾಗಿ ಪದ್ಮನಾಭ ನಗರದಲ್ಲಿ ನಿರ್ಮಿಸಿರುವ ಆಸ್ಪತ್ರೆ ಉದ್ಘಾಟನೆಗೆ ಸಿದ್ಧವಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಿಧಾನ ಸಭಾ ಕ್ಷೇತ್ರದಲ್ಲೂ ಇಂತಹ ಆಸ್ಪತ್ರೆ ನಿರ್ಮಿಸಲಾಗುತ್ತದೆ ಎಂದರು.
ಶಾಲಾ ಕಾಲೇಜುಗಳ ಪುನಾರಂಭದ ಬಗ್ಗೆ ತಜ್ಞರು ಶಿಫಾರಸು ಮಾಡಿದ್ದಾರೆ. ತರಗತಿ ಆರಂಭಿಸಲು ಪೋಷಕರ ಅನುಮತಿ ಪಡೆಯಬೇಕು. ಪೋಷಕರು ಇಚ್ಛಿಸಿದರೆ ಮಾತ್ರ ಮಕ್ಕಳನ್ನು ಕಳುಹಿಸಬಹುದು ಎಂದು ಅಶೋಕ್ ತಿಳಿಸಿದರು.
ರಾಜ್ಯದಲ್ಲಿ 1,186 ಮಂದಿಗೆ ಕೊರೋನಾ ಸೋಂಕು, 1,776 ಜನ ಗುಣಮುಖ, 24 ಸಾವು