ನವದೆಹಲಿ: ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಜಾರಿಗೆ ಸರ್ಕಾರ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಲೋಕಸಭೆಯಲ್ಲಿ ಮಂಗಳವಾರ ಲಿಖಿತವಾಗಿ ಪ್ರಕಟಿಸಿದೆ.
ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೊಳಿಸುವ ಬಗ್ಗೆ ಕೇಂದ್ರ ಚರ್ಚಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಉನ್ನತ ನಾಯಕರು ಹಲವು ಸಂದರ್ಭಗಳಲ್ಲಿ ಹೇಳಿದ್ದರು. ಈಗ ಕೇಂದ್ರ ಸರ್ಕಾರ ಲಿಖಿತವಾಗಿಯೇ ಸ್ಪಷ್ಟನೆ ನೀಡಿದೆ.
ಎನ್‌ಆರ್‌ಸಿ ಜಾರಿ ನಿರ್ಧಾರ ಸದ್ಯಕ್ಕಿಲ್ಲ- ಕೇಂದ್ರ ಸರ್ಕಾರ ಸ್ಪಷ್ಟನೆ
Follow Us