newsics.com
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸಂಪುಟದ ಸಚಿವರಾಗಿ 24 ಶಾಸಕರು ಪ್ರಮಾಣವಚನ ಸ್ವೀಕರಿಸಿದರು.
ಶನಿವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಪ್ರಮಾಣವಚನ ಬೋಧಿಸಿದರು.
ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್.ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ, ಆರ್.ಬಿ.ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಶರಣ ಪ್ರಕಾಶ ಪಾಟೀಲ್, ಮಂಕಾಳ ಸುಬ್ಬ ವೈದ್ಯ, ಲಕ್ಷ್ಮಿ ಹೆಬ್ಬಾಳಕರ, ರಹೀಂ ಖಾನ್, ಡಿ.ಸುಧಾಕರ್, ಸಂತೋಷ್ ಎಸ್.ಲಾಡ್, ಎನ್.ಎಸ್. ಬೋಸರಾಜು, ಬೈರತಿ ಸುರೇಶ್,ಮಧು ಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್, ಬಿ.ನಾಗೇಂದ್ರ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಮೇ 20 ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿ.ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅವರ ಜತೆ ಜಿ. ಪರಮೇಶ್ವರ, ಕೆ.ಎಚ್ ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ ಜಾರಕಿಹೊಳಿ, ಎಚ್.ಕೆ ಪಾಟೀಲ, ರಾಮಲಿಂಗಾರೆಡ್ಡಿ, ಪ್ರಿಯಾಂಕ ಖರ್ಗೆ, ಜಮೀರ್ ಅಹ್ಮದ್ ಖಾನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈಗ ಸಿದ್ದರಾಮಯ್ಯ ಸಂಪುಟದಲ್ಲಿ ಡಿಸಿರಂ ಡಿಕೆಶಿ ಸೇರಿ 33 ಸಚಿವರಿದ್ದಾರೆ.